ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಂಜನೇಯ ಸ್ವಾಮಿಯ ಜನ್ಮಸ್ಥಳವಾದ ಪವಿತ್ರ ಅಂಜನಾದ್ರಿ ಬೆಟ್ಟದ Anjanadri Hill ಅಭಿವೃದ್ಧಿಗೆ 100 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಕುರಿತಂತೆ ಬಜೆಟ್’ನಲ್ಲಿ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ ಎಂದಿದ್ದಾರೆ.
ಕೊಪ್ಪಳ ಜಿಲ್ಲೆಯ ಆಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವವನ್ನು ಹೊಂದಿದ್ದು ಇದರ ಅಭಿವೃದ್ಧಿಗೆ 100 ಕೋಟಿ ಅನುದಾನವನ್ನು ನೀಡಲಾಗುವುದು ಎಂದಿದ್ದಾರೆ.
Also read: ಗೊತ್ತು ಗುರಿ ಇಲ್ಲದ ಬಜೆಟ್: ಬೀದರ್ ಶಾಸಕ ಡಾ. ಶೈಲೇಂದ್ರ ವಾಗ್ದಾಳಿ
ಜೊತೆಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಕೇಬಲ್ ಕಾರ್ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಇದರೊಂದಿಗೆ ಜೊತೆಗೆ ಹಲವು ಇಂಟ್ರಪ್ರೇಷನ್ ಸೆಂಟರ್ ತೆರೆಯಲಾಗುವುದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post