ಕಲ್ಪ ಮೀಡಿಯಾ ಹೌಸ್ | ಧಾರವಾಡ |
ಲೋಕಸಭೆ ಸಾರ್ವತ್ರಿಕ ಚುನಾವಾಣೆ 2024ಕ್ಕೆ ಸಂಭಂದಿಸಿದಂತೆ ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈಗಾಗಲೇ ಚುನಾವಣಾ ಕರ್ತವ್ಯ ನಿರ್ವಹಣೆಗೆ ನೋಡಲ್ ಅಧಿಕಾರಿ, ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ನಿಯೋಜಿಸಿ, ಆದೇಶಿಸಲಾಗಿದೆ. ಯಾವುದೇ ಅಧಿಕಾರಿ, ಸಿಬ್ಬಂದಿಗಳು ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ರಜೆ ಅಥವಾ ಗೈರು ಹಾಜರಾಗಬಾರದು. ಅನುಮತಿ ಪಡೆಯದೆ ಗೈರಾದಲ್ಲಿ ಗಂಭೀರವಾಗಿ ಪರಿಗಣಿಸಿ, ಅಂತವರನ್ನು ಜಿಲ್ಲೆಯಿಂದ ಬಿಡುಗಡೆ ಮಾಡಿ, ಭಾರತ ಚುನಾವಣಾ ಆಯೋಗಕ್ಕೆ ಶಿಸ್ತು ಕ್ರಮಕೈಗೊಳ್ಳಲು ಶಿಪ್ಪಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅವರುಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ಕಾರ್ಯಗಳಿಗೆ ನೂತನವಾಗಿ ನಿಯೋಜಿತರಾಗಿರುವ ನೋಡಲ್ ಅಧಿಕಾರಿಗಳ, ಚುನಾವಣಾ ಅಧಿಕಾರಿ, ಸಿಬ್ಬಂದಿಗಳ ಸಭೆ ಜರುಗಿಸಿ ಮಾತನಾಡಿದರು.

ನೊಡಲ್ ಅಧಿಕಾರಿಗೆ ತನ್ನ ಅಧೀನದಲ್ಲಿ ಕರ್ತವ್ಯ ನಿರ್ವಹಿಸಲು ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಅವರ ತಂಡದ ಸದಸ್ಯರನ್ನಾಗಿ ನೇಮಿಸಿದೆ. ಪ್ರತಿ ನೊಡಲ್ ಅಧಿಕಾರಿ ತನ್ನ ವಿಭಾಗದ ಕಾರ್ಯ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ ನೀಡಿ, ತನ್ನ ತಂಡವನ್ನು ಸುಸಜ್ಜಿತಗೊಳಿಸುವುದು ಅವರ ಕರ್ತವ್ಯವಾಗಿದೆ. ಪ್ರತಿಯೊಬ್ಬ ಅಧಿಕಾರಿ ತನಗೆ ನಿಯೋಜಿಸಿದ ಚುನಾವಣಾ ಕಾರ್ಯಗಳ ಬಗ್ಗೆ, ಅದಕ್ಕೆ ಅನ್ವಯಿಸುವ ಸೆಕ್ಷನ್, ಕಾನೂನು, ಐಪಿಸಿ ತಿಳಿದಿರಬೇಕು. ತನ್ನ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

Also read: ಮಕ್ಕಳ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಗೆ ರಾಗಿ ಮಾಲ್ಟ್ ಸಹಕಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚುನಾವಣಾ ಸಹಾಯವಾಣಿ, ಕಂಟ್ರೋಲ್ ರೂಂ ಸರಿಯಾಗಿ ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಯಾವುದೇ ಚುನಾವಣಾ ಸಿಬ್ಬಂದಿ ಪೂರ್ವಾನುಮತಿ ಪಡೆಯದೇ ರಜೆ ಹೋಗುವುದಾಗಲಿ ಅಥವಾ ಗೈರು ಹಾಜರಾಗುವುದಾಗಲಿ ಮಾಡುವಂತಿಲ್ಲ ಇದನ್ನು ಆಯಾ ನೋಡಲ್ ಅಧಿಕಾರಿಗಳು ನಿಗಾವಹಿಸಬೇಕು. ಕರ್ತವ್ಯದಲ್ಲಿ ಉದಾಸೀನತೆ ತೋರುವ, ನಿಯಮ ಮೀರುವ ಸಿಬ್ಬಂದಿ, ಅಧಿಕಾರಿಗಳಿಗೆ ಆಯಾ ನೊಡಲ್ ಅಧಿಕಾರಿಗಳು, ನೋಟಿಸ್ ನೀಡಿ, ಅವರ ಮೇಲೆ ಕ್ರಮ ಕೈಗೊಳ್ಳಲು ತಮ್ಮ ವರದಿಯೊಂದಿಗೆ ಶಿಸ್ತುಕ್ರಮಕ್ಕಾಗಿ ಜಿಲ್ಲಾ ಚುನಾವಣಾ ಆಯೋಗಕ್ಕೆ ಶಿಪಾರಸ್ಸು ಮಾಡಬೇಕೆಂದು ಅವರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿ, ಸಭೆ ನಿರ್ವಹಿಸಿದರು. ಸಭೆಯಲ್ಲಿ ಜಿಲ್ಲಾ ಪೆÇಲೀಸ್ ಅಧೀಕ್ಷಕ ಡಾ.ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ರಾಜೀವ ಎಂ. ಮಾತನಾಡಿದರು.
ಎಲ್ಲ ನೋಡಲ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ತಹಶೀಲ್ದಾರ, ಶಿರಸ್ತೆದಾರರು, ವಿಷಯ ನಿರ್ವಾಹಕರು, ನೊಡಲ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post