ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ 9 ವರ್ಷದಲ್ಲಿ ರಾಜ್ಯದಲ್ಲಿ 54,858 ಕಿ.ಮೀ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಆಗಿದೆ. ಪ್ರತಿ ದಿನ 371 ಕಿ.ಮೀ ರಸ್ತೆ ಅಭಿವೃದ್ದಿ ಆಗುತ್ತಿದ್ದು ಭಾರತ ದೇಶ ರಸ್ತೆ ಅಭಿವೃದ್ದಿಯಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಸಂತಸ ವ್ಯಕ್ತಪಡಿಸಿದರು.
ಈ ಕುರಿತಂತೆ ಮಾತನಾಡಿದ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ Union Minister Nitin Gadkari ಅವರು ರೂ.6.68 ಕೋಟಿ ದಕ್ಷಿಣ ವಲಯಕ್ಕೆ ನೀಡಿದ್ದಾರೆ. ಸಿಗಂದೂರು ಕೇಬಲ್ ಸೇತುವೆ, ರಾಷ್ಟ್ರೀಯ ಹೆದ್ದಾರಿ ಉನ್ನತೀಕರಣ, ರಿಂಗ್ ರಸ್ತೆ, ರಾಣೆಬೆನ್ನೂರು-ಬೈಂದೂರು ರಸ್ತೆ, ಮೇಲ್ಸೇತುವೆಗಳಿಗೆ ಕೇಂದ್ರ ಸಚಿವರು ಅನುದಾನ ಒದಗಿಸಿದ್ದು, ತೆರ್ ಸಾರಿಗೆಯನ್ನು ಸುರಕ್ಷಿತ ಮತ್ತು ಕಡಿಮೆ ಸಮಯದಲ್ಲಿ ತಲುಪುವಂತೆ ಮಾಡಿದ್ದಾರೆ ಎಂದರು.
ಕೊಡಚಾದ್ರಿ ಕೇಬಲ್ ಕಾರ್ ಯೋಜನೆ Kodachadri Cable Car Project ರೂ.380 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಟೆಂಡರ್ ಹಂತದಲ್ಲಿದ್ದು ಒಟ್ಟು ರೂ.2,250 ಕೋಟಿ ಕಾಮಗಾರಿ ಮಂಜೂರಾತಿ ಪ್ರಕ್ರಿಯೆಯಲ್ಲಿವೆ. ಸಚಿವರು ಶರಾವತಿ ಹಿನ್ನೀರು ಪ್ರದೇಶದಲ್ಲಿ ಗ್ರಾಪಂ ರಸ್ತೆಯನ್ನು ರಾ.ಹೆದ್ದಾರಿಯಾಗಿ ಉನ್ನತೀಕರಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.
Also read: ಸುಸಜ್ಜಿತ ಮೈದಾನಗಳಿದ್ದರೂ ಕ್ರೀಡಾಪಟುಗಳ ಸಂಖ್ಯೆ ಕಡಿಮೆ: ಇಮ್ತಿಯಾಜ್ ಅಹಮದ್ ಬೇಸರ
280 ಬಿಎಸ್’ಎನ್’ಎಲ್ ಟವರ್’ಗೆ ಮಂಜೂರಾತಿ ದೊರೆತಿದೆ. 2008 ರಿಂದ 22 ರವರೆಗೆ ಜಿಲ್ಲೆಯಲ್ಲಿ ರಸ್ತೆ, ಮೆಡಿಕಲ್ ಕಾಲೇಜು, ಕೃಷಿ, ತೋಟಗಾರಿಕೆ, ಪಶು ವೈದ್ಯಕೀಯ , ಕೇಂದ್ರೀಯ ವಿದ್ಯಾಲಯ, ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ ಸೇರಿದಂತೆ ಸಮಗ್ರ ಅಭಿವೃದ್ದಿ ಕಂಡಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















