ಕಲ್ಪ ಮೀಡಿಯಾ ಹೌಸ್ | ಇಟಾನಗರ |
ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಮೇಲಿಂದ ಮೇಲೆ ಶಾಕ್ ನೀಡಲಾಗುತ್ತಿದ್ದು, ಇಬ್ಬರು ಕೈ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಅರುಣಾಚಲ ಪ್ರದೇಶದಲ್ಲಿ ಇಬ್ಬರು ಕಾಂಗ್ರೆಸ್ ಪಕ್ಷದ ಹಾಗೂ ನ್ಯಾಶನಲ್ ಪೀಪಲ್ ಪಾರ್ಟಿಯ ಇಬ್ಬರು ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪೆಮಾಖಂಡು ಅವರ ಸಮ್ಮುಖದಲ್ಲಿ ಪ್ರತಿಪಕ್ಷದ ಕಾಂಗ್ರೆಸ್ ಶಾಸಕರಾದ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿಂಗ್ ಲೋವಾಂಗ್ದಾಂಗ್ ಮತ್ತು ಎನ್ಪಿಪಿ ಶಾಸಕರಾದ ಮುಚ್ಚು ಮಿಥಿ ಮತ್ತು ಗೋರ್ಕ ಬಸಾರ್ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
Also read: 22 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸಿಮಿ ಉಗ್ರ ಹನೀಫ್ ಶೇಕ್ ಅಂದರ್
60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭಾ ಚುನಾವಣೆ ಜೊತೆಗೆ ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post