ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಲೋಕಸಭಾ ಚುನಾವಣೆ #ParliamentElection ಘೋಷಣೆಗೂ ಮುನ್ನವೇ ಚುರುಕಾಗಿ ತನ್ನ ಜವಾಬ್ದಾರಿ ನಿರ್ವಹಿಸಲು ಪಣತೊಟ್ಟಿರುವ ಜಿಲ್ಲಾಡಳಿತ ಇದಕ್ಕಾಗಿ ನಿರಂತರವಾಗಿ ಕಾರ್ಯಪ್ರವೃತ್ತವಾಗಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ, ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಪಣತೊಟ್ಟಿದೆ.
ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಸೂಕ್ತ ಸ್ಥಳಗಳಲ್ಲಿ ಅಂತರ್ ಜಿಲ್ಲಾ ಚೆಕ್ ಪೋಸ್ಟ್’ಗಳನ್ನು #CheckPost ಸ್ಥಾಪಿಸಲು ಜಿಲ್ಲಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ಹಾಗೂ ಇತರೇ ಅಧಿಕಾರಿಗಳೊಂದಿಗೆ ಮೂಡಿಗೆರೆ #Mudigere ಹಾಗೂ ಚಿಕ್ಕಮಗಳೂರು #Chikkamagalur ವಿಧಾನಸಭಾ ಕ್ಷೇತ್ರದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದರು.
ತಾಲೂಕಿನ ಬಸ್ಕಲ್, ಕಸ್ಕೆಬೈಲು, ಕೊಲ್ಲಿಬೈಲು, ಕಿರಗುಂದ ಮತ್ತು ಕೊಟ್ಟಿಗೆಹಾರ ಗ್ರಾಮಗಳಿಗೆ ಹಾಗೂ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿರುವ ಮಾಗಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮತಗಟ್ಟೆಗಳಿಗೆ ಭೇಟಿ
ಇನ್ನು ಅಧಿಕಾರಿಗಳ ತಂಡ ಎರಡೂ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಮೂಡಿಗೆರೆ ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿರುವ ಬಿಳಗುಳ, ಅಂಡಛತ್ರ, ಉಪ್ಪಳ್ಳಿ, ವಿಜಯಪುರದ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post