ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ Indian Foreign Minister S Jai Shankar ಅವರು ಫೆ.28ರಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ PM Narendra Modi ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅಂದು ಬಿಡುಗಡೆಗೊಳಿಸಲಿದ್ದಾರೆ. ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ ಫೆ.28ರಂದು ಸಂಜೆ 4.30ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ.

Also read: ಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಜೋಶಿ ವಿಶ್ವಾಸ
ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕಾಗಿ ಕೈಗೊಂಡ ಚಟುವಟಿಕೆಗಳನ್ನು ಈ ಪುಸ್ತಕ ವಿಸ್ತಾರವಾಗಿ ಒಳಗೊಂಡಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post