ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆ ಮಾಡುತ್ತಿದ್ದ ಯುವಮೋರ್ಚಾದ ಪದಾಧಿಕಾರಿಗಳು ಮತ್ತು ಮಹಿಳೆಯರು ಕಾಂಗ್ರೆಸ್ ಕಚೇರಿಯತ್ತ ನುಗ್ಗಿ, ಕಚೇರಿಯ ಗೇಟನ್ನು ತೆಗೆಯಲು ಯತ್ನಿಸಿದಾಗ ಪೊಲೀಸರು ಅವರನ್ನು ಬಂಧಿಸಿದರು.

Also read: ಸಿಲಿಂಡರ್ ಸ್ಪೋಟ: ಮನೆಯ ಒಳಭಾಗ ಸಂಪೂರ್ಣ ಜಖಮ್
ಇದೊಂದು ಹೇಯ ಕೃತ್ಯವಾಗಿದೆ ರಾಜ್ಯಸಭಾ ಸದಸ್ಯನ ಪರವಾಗಿ ಘೋಷಣೆ ಕೂಗಿದವರು ಪಾಕಿಸ್ತಾನದ ಪರವಾಗಿಯೂ ಘೋಷಣೆ ಕೂಗಿದ್ದಾರೆ. ಈ ಘೋಷಣೆ ಕೂಗಿದ್ದರೂ ಕೂಡ ಮುಖ್ಯಮಂತ್ರಿಗಳಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಓಲೈಕೆ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಮೋಹನ್‍ರೆಡ್ಡಿ, ಕೆ.ಇ.ಕಾಂತೇಶ್, ಸೀತಾಲಕ್ಷ್ಮೀ, ಸುರೇಖಾ ಮುರಳೀಧರ್, ಯಶೋಧ ವೈಷ್ಣವ್, ಪುರುಷೋತ್ತಮ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post