ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಕೃತಿ, ಪರಿಸರ ಉಳಿಸುವ ನಿಟ್ಟಿನಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಈ ಬಾರಿ 7 ತಿಂಗಳ ಮೊದಲೇ ಕಾರ್ಯೋನ್ಮುಖರಾಗಿದ್ದು, ಪಿಓಪಿ ಮೂರ್ತಿಗಳ ತಯಾರಕರು ಮತ್ತು ಪಟಾಕಿ Crackers ಮಾರಾಟಗಾರರಿಗೆ ಸ್ಪಷ್ಟ ಸೂಚನೆಯೊಂದಿಗೆ ನೋಟಿಸ್ ನೀಡಲು ಆದೇಶ ನೀಡಿದ್ದಾರೆ.
ಈ ಸಂಬಂಧ ಪರಿಸರ ಇಲಾಖೆಯ ಪ್ರಧಾನಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಪ್ರಕೃತಿ ಪರಿಸರ ಉಳಿದರಷ್ಟೇ ನಾವು ಉಳಿಯಲು ಸಾಧ್ಯ ಈ ನಿಟ್ಟಿನಲ್ಲಿ ಜಲ ಮೂಲಗಳನ್ನು ಕಲುಷಿತಗೊಳಿಸುವ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ಮೂರ್ತಿಗಳ Plaster of Paris ತಯಾರಿಕೆ, ಸಾಗಾಟ ಮತ್ತು ಮಾರಾಟ ನಿಷೇಧಿಸಲಾಗಿದ್ದು, ಈ ಬಗ್ಗೆ ತಯಾರಕರಿಗೆ ಹಬ್ಬಕ್ಕೆ 7 ತಿಂಗಳು ಮುಂಚಿತವಾಗಿಯೇ ಸೂಕ್ತ ತಿಳಿವಳಿಕೆಯೊಂದಿಗೆ ನೋಟಿಸ್ ನೀಡುವಂತೆ ಸೂಚಿಸಿದ್ದಾರೆ.

Also read: ಸುಳ್ಳೇ ಬಿಜೆಪಿಯವರ ಮನೆ ದೇವರು: ಸಿಎಂ ಸಿದ್ದರಾಮಯ್ಯ
ಹಸಿರು ಪಟಾಕಿಗೆ ಮಾತ್ರ ಅವಕಾಶ:
ಅದೇ ರೀತಿ ಹೆಚ್ಚು ವಾಯು ಮಾಲಿನ್ಯಮತ್ತು ಶಬ್ದ ಮಾಲಿನ್ಯ ಉಂಟು ಮಾಡುವ ಸಾಂಪ್ರದಾಯಿಕ ಪಟಾಕಿಗಳು ಸಹ ಪರಿಸರಕ್ಕೆ ಮಾರಕವಾಗಿದ್ದು, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಅನುಸರಣೆಯ ಹಿನ್ನೆಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವ ಮಾರಾಟಗಾರರ ಪಟ್ಟಿಯನ್ನು ಸ್ಥಳೀಯ ಸಂಸ್ಥೆಗಳಿಂದ ಪಡೆದು, ಅವರೆಲ್ಲರಿಗೂ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಮತ್ತು ಮಾರಾಟ ಮಾಡುವಂತೆ ನೋಟಿಸ್ ನೀಡಲು ಆದೇಶಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post