No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Monday, August 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ದೇವೇಗೌಡರ ಪಾತ್ರ ದೊಡ್ಡದು: ಬಸವರಾಜ ಬೊಮ್ಮಾಯಿ

kalpa News by kalpa News
March 1, 2024
in ಬೆಂಗಳೂರು ನಗರ, ರಾಜಕೀಯ
0
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪಾತ್ರ ದೊಡ್ಡದು. ಕನ್ನಡದ ಬಾವುಟವನ್ನು ದೆಹಲಿಯ ಕೆಂಪು ಕೋಟೆಯ ಮೇಲೆ ಹಾರಿಸಿದ ಏಕೈಕ ಕನ್ನಡಿಗ ದೇವೇಗೌಡರು, ಅವರ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ದೇವೇಗೌಡರ Devegowda ಕುರಿತು ನೇ ಭ ರಾಮಲಿಂಗ ಶೆಟ್ಟಿ ಅವರು ಬರೆದ ಮಣ್ಣಿನ ಮಗ ಪುಸ್ತಕವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ರಾಮಲಿಂಗ ಶೆಟ್ಟಿ ಬರೆದಿರುವ ಮಣ್ಣಿನ ಮಗ, ನಾನು ಕಂಡಂತೆ ಮತ್ತು ನಾಡು ಕಂಡಂತೆ ಇದು ಒಂದು ರೀತಿಯಲ್ಲಿ ಕರ್ನಾಟಕದ ಇತಿಹಾಸ ಕೃಷಿ ‌ನೀರಾವರಿ, ಸಾಮಾಜಿಕ ಬದುಕನ್ನು ಬಿಂಬಿಸುವ ಪುಸ್ತಕ ಇದಾಗಿದೆ ಎಂದು ಹೇಳಿದರು.
ದೇವೇಗೌಡರ ಬಗ್ಗೆ ಎಷ್ಟೇ ಪುಸ್ತಕ ಬಂದರೂ ಅವರ ಬದುಕಿನ ಬಗ್ಗೆ ಇನ್ನೊಂದು ಪುಸ್ತಕ ಬರೆಯಬೇಕು ಎನ್ನುವಷ್ಟು ವಿಸ್ತಾರವಾದ ಬದುಕು ಅವರದಾಗಿದೆ. ಎಲ್ಲರನ್ನು ಸ್ಪರ್ಷಿಸಿದಂತ ಬದುಕು ಅವರದು. ಅತ್ಯಂತ ವಿಶಿಷ್ಟ ಮತ್ತು ವಿಚಿತ್ರ ಬದುಕು ಅವರದು. ಅವರು ಸ್ಥಾನ ಮಾನ ಯಾವುದಕ್ಕೂ ತಲೆ‌ಕೆಡಿಸಿಕೊಳ್ಳದೇ ಹೋರಾಟ ಮಾಡಿದವರು. ವಿಚಿತ್ರ ಏನೆಂದರೆ ಅವರ ಕೀರ್ತಿಗಿಂತ ಸ್ಪೂರ್ತಿ ದೊಡ್ಡದಿದೆ.

ನಾನು ಅವರ ಜೊತೆಗೆ ಬಹಳ ಹತ್ತಿರದಿಂದ ಕೆಲಸ ಮಾಡುವ ಅವಕಾಶ ಸಿಕ್ಕಿತು. ಅವರ ಹೋರಾಟ, ಅಧಿಕಾರದ ದಿನಗಳು, ಅಧಿಕಾರ ಇಲ್ಲದಿರುವ ದಿನಗಳು ಎಲ್ಲವನ್ನು ಹತ್ತಿರದಿಂದ ನೋಡಿದ್ದೇನೆ. ನಾನು ಅದೃಷ್ಟವಂತ. ನಾನು ಅವರಿಗೆ ಕುಮಾರಸ್ವಾಮಿಗಿಂತಲೂ ಹತ್ತಿರ ಇದ್ದೆ ಎಂದು ಹೇಳಿದರು.

ದೇವೇಗೌಡರದು ಕರ್ಣನ ವ್ಯಕ್ತಿತ್ವ. ಅವರು ಆರವತ್ತು ವರ್ಷದ ರಾಜಕಾರಣದಲ್ಲಿ ಐದಾರು ವರ್ಷ ಮಾತ್ರ ಅಧಿಕಾರ ಮಾಡಿದ್ದಾರೆ. ಉಳಿದ ಅವಧಿಯಲ್ಲಿ ದೇಶ, ರಾಜ್ಯದ ಹಿತಕ್ಕಾಗಿ ಹೋರಾಟ ಮಾಡುತ್ತ ಬಂದಿದ್ದಾರೆ. ಹಠ, ಛಲ, ಸವಾಲು ಸ್ವೀಕರಿಸುವ ಛಾತಿ ಒಂದು ಕಡೆ ಇದ್ದರೆ, ಅಧಿಕಾರ ಇದ್ದಾಗ, ಹೊಲದಲ್ಲಿ ಕೆಲಸ ಮಾಡುವ ರೈತ, ದುಡಿಯುವವರ ಬದುಕಿಗೆ ಧ್ವನಿಯಾಗಿ ನಿಂತಿದ್ದರು ಎಂದು ಹೇಳಿದರು.

ದೇವೇಗೌಡರು ಸಣ್ಣ ವಯಸ್ಸಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು.24 ಜನ ಶಾಸಕರನ್ನು ಇಟ್ಟುಕೊಂಡು ಸರ್ಕಾರವನ್ನು ನಡುಗಿಸಿದ್ದರು. ಅವರು ಅಧಿಕಾರಕ್ಕೆ ಬಂದ ಮೇಲೆ ನೀರಾವರಿ ಸಚಿವರಾದರು, ಪಕ್ಕದ ರಾಜ್ಯಗಳು ನೀರಾವರಿಗೆ ಆದ್ಯತೆ ಕೊಟ್ಟಷ್ಟು ನಾವು ಕೊಡಲಿಲ್ಲ‌. ಇದು ಅವರ ಮನಸಿಗೆ ವ್ಯಥ್ಯೆ ಉಂಟು ಮಾಡಿತ್ತು. ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ಬೆಳಿಗ್ಗೆಯಿಂದ ರಾತ್ರಿ ಹತ್ತರವರೆಗೆ ಸುಧೀರ್ಘ ಸಭೆ ನಡೆಸಿದರು. ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆ ಈಗಲೂ ಇದೆ. ಅವರು ನಾರಾಯಣಪುರ ಕಾಲುವೆ ನಿರ್ಮಾಣವನ್ನು ಅತಿ ವೇಗದಲ್ಲಿ ಮಾಡಿದರು.

ರಾಜಕಾರಣದಲ್ಲಿ ಯಾವುದಾದರು ಕೆಲಸ ಆಗಬೇಕು ಅಂತ‌ ಇದ್ದರೆ ಅದು ಆಗಬಾರದು ಅಂತ ಬಹಳ ಜನರಿಗೆ ಇರುತ್ತದೆ. ಅವರ ಮೇಲೆ ತನಿಖೆಗೆ ಆಗ್ರಹಿಸಿದ್ದರು. ದೇವೇಗೌಡರು ಅದನ್ನು ಸಿಬಿಐ ತನಿಖೆಗೆ ವಹಿಸಿಸಿದ್ದರು. ತನಿಖೆಗೆ ಆಗ್ರಹಿಸಿದ್ದ ಪಕ್ಷ ಅವರ ವಿರುದ್ದ ತನಿಖೆ ಆಗತ್ಯವಿಲ್ಲ ಎಂದು ವಾಪಸ್ ಪಡೆದರು. ದೇವೇಗೌಡರು ಪ್ರಧಾನಿಯಾರ ಮೇಲೆ ಕೇಂದ್ರದಿಂದ ಎಐಬಿಪಿ ಯೋಜನೆ ಮೂಲಕ ಕೃಷ್ಣಾ ಮೇಲ್ದಂಡೆ ಯೋಜನೆಗೆ ಹೆಚ್ಚಿನ ಅನುದಾನ ಕೊಡಿಸಿದ್ದರು. ಅವರನ್ನು ಉತ್ತರ ದಕ್ಷಿಣ ಎಂದು ವಿಭಾಗಿಸಿದ್ದಾರೆ. ಕಾವೇರಿಯಿಂದ ಬೆಂಗಳೂರಿಗೆ 9 ಟಿಎಂಸಿ ನೀರು ತರುವಲ್ಲಿ ಕಾರಣೀಕರ್ತರಾಗಿದ್ದಾರೆ ಎಂದು ಹೇಳಿದರು.

ಅವರು ಸಿಎಂ ಆಗಿದ್ದಾಗ ಪ್ರಮುಖ ಪತ್ರಿಕೆಯಲ್ಲಿ ವಿದ್ಯುತ್ ಅಭಾವದ ಕುರಿತು ವರದಿ ಬಂದಿತ್ತು. ಆಗ ದೇವೇಗೌಡರು ದೆಹಲಿಯಲ್ಲಿದ್ದರು, ಅಲ್ಲಿಂದ ನೇರವಾಗಿ ಮುಂಬೈಗೆ ಹೋಗಿ ಬಾಳಾಸಾಹೇಬ್ ಠಾಕ್ರೆಯವರನ್ನು ಭೇಟಿ ಮಾಡಿ, ವಸ್ತುಸ್ಥಿತಿ ಹೇಳಿದರು. ಬಾಳಾಸಾಗೇಬ್ ಠಾಕ್ರೆ ಅವರು ಮಹಾರಾಷ್ಟ್ರ ಸರ್ಕಾರದ ಆದೇಶ ರದ್ದು ಮಾಡಿಸಿ ಕರ್ನಾಟಕಕ್ಕೆ ವಿದ್ಯುತ್ ಸರಬರಾಜು ಮಾಡಲು ಸೂಚಿಸಿದರು. ದೇವೇಗೌಡರು ಸಂಬಂಧಗಳನ್ನು ರಾಜ್ಯದ ಹಿತಕ್ಕೆ ಬಳಸಿಕೊಳ್ಳುತ್ತಿದ್ದರು.

ಹುಬ್ಬಳ್ಳಿ ಈದ್ಗಾ ಮೈದಾನದ ಸಮಸ್ಯೆ ಬಗೆ ಹರಿಸಲು ಅಧಿಕಾರ ಮತ್ತು ಅಧಿಕಾರಿಗಳನ್ನು ಹೊರಗಿಟ್ಟು ಸಮಸ್ಯೆ ಬಗೆಹರಿಸಬೇಕು ಅಂತ ಹೇಳಿ, ದೇವೇಗೌಡರು ನನ್ನನ್ನು ಅಲ್ಲಿಗೆ ಕಳಿಸಿ, ಅಂಜುಮನ್ ಇಸ್ಲಾಂನವರು ರಾಷ್ಟದರ ಧ್ವಜ ಹಾರಿಸುವಂತೆ ಒಪ್ಪಿಸಿದಂತ ಧೀಮಂತ ನಾಯಕ ದೇವೇಗೌಡರು. ಅಂತ ದೊಡ್ಡ ಸಮಸ್ಯೆಯನ್ನು ದೇವೇಗೌಡರು ಚಾಣಾಕ್ಷತನದಿಂದ ಬಗೆ ಹರಿಸಿದ್ದರು. ಅನೇಕ ಜ್ವಲಂತ ಸಮಸ್ಯೆಗಳನ್ನು ಬಗೆ ಹರಿಸುವುದರಲ್ಲಿ ದೊಡ್ಡ ಪಾತ್ರ ವಹಿಸಿದ್ದಾರೆ ಎಂದರು.

Kalahamsa Infotech private limitedಇದೇ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಮಂಜುನಾಥ್ ಅವರ ಕುರಿತು ಮಾತನಾಡಿದ, ಡಾ. ಮಂಜುನಾಥ ಅವರು ನಿರಂತರ ದಣಿವರಿಯದೇ ಸುರಿಯುವ ಮಳೆಯಂತೆ ಇದ್ದಾರೆ. ನಗುನಗುತ್ತಲೇ ಹಲವಾರು ಜೀವಗಳನ್ನು ಉಳಿಸಿದ ವ್ಯಕ್ತಿ. ಈಗಿನ ಕಾರ್ಪೊರೇಟ್ ಜಗತ್ತಿನಲ್ಲಿ ಮಂಜುನಾಥ ಅವರು ಮನಸು ಮಾಡಿದ್ದರೆ ದೊಡ್ಡ ಶ್ರೀಮಂತರಾಗಿತ್ತಿದ್ದರು. ಅವರು ಜನರನ್ನು ಗಳಿಸಿ ಶ್ರೀಮಂತರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಕಸಾಪ ಅಧ್ಯಕ್ಷ ಮಹೇಶ ಜೋಷಿ, ಸಾಹಿತಿ ಹಂಪಾ ನಾಗರಾಜಯ್ಯ, ಮಾಜಿ ಸಚಿವರಾದ ಲೀಲಾದೇವಿ ಆರ್. ಪ್ರಸಾದ್, ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಕೃತಿಕಾರ ರಾಮಲಿಂಗ ಶೆಟ್ಟಿ ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

http://kalpa.news/wp-content/uploads/2024/02/VID-20240229-WA0024.mp4
Tags: BangaloreBasavaraja BommaiDevegowdaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದೇವೇಗೌಡರಬಸವರಾಜ ಬೊಮ್ಮಾಯಿಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲೋಕಸಭಾ ಚುನಾವಣೆ | ಬಿಜೆಪಿ ಮೊದಲ ಪಟ್ಟಿಯಲ್ಲಿ 50 ಹೆಸರು ಫೈನಲ್ | ಅತಿ ಶೀಘ್ರದಲ್ಲೇ ಬಿಡುಗಡೆ

Next Post

ಕಾಂಗ್ರೆಸ್ ಹೋರಾಟದ ಫಲವಾಗಿ ಸಿಕ್ಕ ಸ್ವಾತಂತ್ರ್ಯದಿಂದ ನೀವೆಲ್ಲಾ ಇಲ್ಲಿ ಕುಳಿತಿದ್ದೀರಿ: ಸಿದ್ದರಾಮಯ್ಯ

kalpa News

kalpa News

Next Post
ಕಾಂಗ್ರೆಸ್ ಹೋರಾಟದ ಫಲವಾಗಿ ಸಿಕ್ಕ ಸ್ವಾತಂತ್ರ್ಯದಿಂದ ನೀವೆಲ್ಲಾ ಇಲ್ಲಿ ಕುಳಿತಿದ್ದೀರಿ: ಸಿದ್ದರಾಮಯ್ಯ

ಕಾಂಗ್ರೆಸ್ ಹೋರಾಟದ ಫಲವಾಗಿ ಸಿಕ್ಕ ಸ್ವಾತಂತ್ರ್ಯದಿಂದ ನೀವೆಲ್ಲಾ ಇಲ್ಲಿ ಕುಳಿತಿದ್ದೀರಿ: ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL