ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸ್ಫೋಟಕ ಇಟ್ಟು ಹೋಗಿದ್ದ ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.
ಮೈಸೂರಿನ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

Also read: ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ನಗರದಲ್ಲಿ 2 ದಿನ ಅತಿರುದ್ರ ಮಹಾಯಾಗ
ಮಂಗಳೂರು ಕುಕ್ಕರ್ ಬಾಂಬ್ Mangalore Cooker Bomb ಹಾಗೂ ಈ ಸ್ಫೋಟಕ್ಕೂ ಸಾಮ್ಯತೆ ಇರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ತನಿಖೆ ನಡೆಯುತ್ತಿದೆ ಎಂದರು.

ಅಲ್ಪಸಂಖ್ಯಾತರ ತುಷ್ಟೀಕರಣದಿಂದಾಗಿ ಈ ರೀತಿಯ ಘಟನೆಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ರಾಜಕೀಯವಾದ ಹೇಳಿಕೆ ನೀಡಿದ್ದಾರೆ. ಅವರ ಕಾಲದಲ್ಲಿಯೂ ಬಾಂಬ್ ಸ್ಪೋಟವಾಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟವಾದಾಗ ಏನು ಮಾಡಿದ್ದರು? ಆಗಲೂ ತುಷ್ಟೀಕರಣದಿಂದಾಗಿ ಆಗಿತ್ತೇ ಎಂದು ಪ್ರಶ್ನಿಸಿದರು.
ತನಿಖೆ ನಡೆಯುತ್ತಿದೆ
ಸ್ಪೋಟದ ಘಟನೆಯನ್ನು ನಾನು ಖಂಡಿಸುತ್ತೇನೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದರು. ಭಯೋತ್ಪಾದಕ ಕೃತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿ ತನಿಖೆ ಇನ್ನೂ ನಡೆಯುತ್ತಿದೆ ಎಂದರು.

ವಿಧಾನ ಸೌಧದ ಪ್ರಕರಣ ಕುರಿತು ಎಫ್.ಎಸ್.ಎಲ್ ವರದಿಯನ್ನು FSL Report ಸರ್ಕಾರ ಬಹಿರಂಗ ಮಾಡುತ್ತಿಲ್ಲ. ಸತ್ಯವನ್ನು ತಿರುಚುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ತಪ್ಪಿತಸ್ಥರನ್ನು ಶಿಕ್ಷಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಿಯೇ ತೀರುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post