ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಹಾಗೂ ದೇಶದ ನೆಚ್ಚಿನ ಮಹಾನಾಯಕ ಸನ್ಮಾನ್ಯ ನರೇಂದ್ರ ಮೋದಿ ಜೀಯವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಲೆಂದು ಪ್ರಾರ್ಥಿಸಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊಂದಿಗೆ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಪ್ರಾರಂಭಿಸಲಾಯಿತು.
ಬೆಳಗ್ಗೆ ಗಂಗಾಪೂಜೆ ನೆರವೇರಿಸಿ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ,ಕದಶ ರುದ್ರ ಕಲಶಾರಾಧನೆ, ನವಗ್ರಹ, ದುರ್ಗಾ ಸಪ್ತಸದಿ ಹಾಗೂ ಪೂಜಾದಿಗಳು ನೆರವೇರಿದವು. ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಡಾ.ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ತಂಡವು 121 ಪುರೋಹಿತರು ಮಹಾರುದ್ರ ಮಂತ್ರ ಪಠಣದೊಂದಿಗೆ ಅತಿರುದ್ರ ಮಹಾಯಾಗವನ್ನು ನಡೆಸಿಕೊಟ್ಟರು.

Also read: ಮೆಕ್ಯಾನಿಕಲ್ ಕಾರ್ಯಕ್ಷೇತ್ರ ಹೆಚ್ಚಿಸುವಲ್ಲಿ ಶ್ರಮವಹಿಸಿ: ವಿದ್ಯಾರ್ಥಿಗಳಿಗೆ ಮಹದೇವಸ್ವಾಮಿ ಕಿವಿಮಾತು
ಅತಿರುದ್ರಯಾಗದಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ. ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಡಿ.ಎಸ್.ಅರುಣ್, ಸ್ವಾಗತ ಸಮಿತಿಯ ಗೌರವಾಧ್ಯಕ್ಷರು ಎನ್.ಜೆ.ರಾಜಶೇಖರ್ (ಸುಭಾಷ್), ಸಮಿತಿಯ ಅಧ್ಯಕ್ಷರಾದ ಎಸ್.ಎಸ್.ಜ್ಯೋತಿಪ್ರಕಾಶ್, ಉಪಾಧ್ಯಕ್ಷರಾದ ಎಚ್.ವಿ.ಮಹೇಶ್ವರಪ್ಪ, ಎಸ್.ದತ್ತಾತ್ರಿ, ಜ್ಞಾನೇಶ್ವರ್, ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಚ್. ಮಲ್ಲಿಕಾರ್ಜುನ ಸ್ವಾಮಿ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಧನಂಜಯ ಸರ್ಜಿ, ಸಹ ಸಂಚಾಲಕರಾದ ಮಹಾಲಿಂಗಯ್ಯ ಶಾಸ್ತ್ರಿ, ನಾಗಯ್ಯ ಶಾಸ್ತ್ರಿಗಳು, ಮಹಾನಗರ ಪಾಲಿಕೆ ಸದಸ್ಯ .ವಿಶ್ವಾಸ್, ಅನಿತಾ ರವಿಶಂಕರ್, ಮೋಹನ್ ರೆಡ್ಡಿ ಮತ್ತಿತರರು ಯಾಗದಲ್ಲಿ ಭಾಗವಹಿಸಿದ್ದರು.

ವೇದೋಕ್ತವಾದ ನಮಕ(ರುದ್ರ)ದಿಂದ ಅಭಿಷೇಕ ಮಾಡುವುದು ಅತ್ಯಂತ ಶ್ರೇಷ್ಠವಾದದ್ದು. ಭಕ್ತಿ, ಶ್ರದ್ಧೆಯಿಂದ ಒಂದು ಬಾರಿ ರುದ್ರಾಭಿಷೇಕ ಮಾಡಿದರೆ ಸಕೃತಾವರ್ತನ ರುದ್ರಾಭಿಷೇಕ, 11 ಬಾರಿ ಮಾಡಿದರೆ ಏಕಾದಶಾವರ್ತನ ರುದ್ರಾಭಿಷೇಕ, 121 ಬಾರಿ ಮಾಡಿದರೆ ಲಘು(ಶತ) ರುದ್ರಾಭಿಷೇಕ, 1331 ಬಾರಿ ಮಾಡಿದರೆ ಮಹಾರುದ್ರಾಭಿಷೇಕ ಮತ್ತು 14641 ಬಾರಿ ಮಾಡಿದರೆ “ಅತಿರುದ್ರಾಭಿಷೇಕವಾಗುವುದು. ಹೀಗೆ ಏಕೋತ್ತರ ವೃದ್ಧಿಯಲ್ಲಿ ಅಭಿಷೇಕ ಮಾಡಿದರೆ ಅಥವಾ ಮಾಡಿಸಿದರೆ ರುದ್ರನು ಪ್ರೀತನಾಗಿ ಸಮಸ್ತ ಲೋಕಕ್ಕೆ ಕಲ್ಯಾಣವನ್ನುಂಟು ಮಾಡುತ್ತಾನೆ..ಅಲ್ಲದೇ “ಶ್ರುತಂ ಹರತಿ ಪಾಪಾನಿ” ಎನ್ನುವ ಹಾಗೆ ರುದ್ರವನ್ನು ಶ್ರವಣ ಮಾಡುವುದರಿಂದ ನಮ್ಮ ಪಾಪಗಳು ದೂರವಾಗುತ್ತವೆ. ಆ ಉದ್ದೇಶದಿಂದ ಲೋಕಕಲ್ಯಾಣಾರ್ಥವಾಗಿ ಮಹಾಯಾಗವನ್ನು ನೆರವೇರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post