ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಗೆ #LoksabhaElection2024 ಮಾರ್ಚ್ 14 ಅಥವಾ 15ರಂದು ಘೋಷಣೆಯಾಗುವ ಸಾಧ್ಯತೆಯಿದ್ದು, ಅಂದಿನಿಂದಲೇ ನೀತಿ ಸಂಹಿತೆಯೂ ಜಾರಿಯಾಗಲಿದೆ ಎಂದು ಹೇಳಲಾಗಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದು, ಮಾರ್ಚ್ 14 ಅಥವಾ 15ರಂದು ಚುನಾವಣಾ ದಿನಾಂಕವನ್ನು ಆಯೋಗ ಘೋಷಣೆಗೆ ಸಿದ್ದತೆ ಮಾಡಿಕೊಂಡಿದ್ದು, ಅಂದಿನಿಂದಲೇ ನೀತಿ ಸಂಹಿತೆಯೂ #CodeofConduct ಜಾರಿಯಾಗಬಹುದು.
ದೇಶದಾದ್ಯಂತ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ವರದಿಯಾಗಿದ್ದು, ಮೊದಲ ಹಂತದ ಚುನಾವಣೆ ಏಪ್ರಿಲ್ 2ನೇ ವಾರದಲ್ಲಿ ನಡೆಯುವ ಸಾಧ್ಯತೆ ಇದೆ.
ಬಿಜೆಪಿ #BJP ಈಗಾಗಲೇ 195 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಪ್ರಧಾನಿ ಮೋದಿ, ಅಮಿತ್ ಷಾ ಸೇರಿದಂತೆ ಗಣ್ಯ ನಾಯಕರ ಹೆಸರು ಮೊದಲ ಪಟ್ಟಿಯಲ್ಲಿದೆ. ಒಂದೆರಡು ದಿನಗಳಲ್ಲಿ ಬಿಜೆಪಿ 2ನೇ ಪಟ್ಟಿಯೂ ಸಹ ಬಿಡುಗಡೆಯಾಗಲಿದೆ ಎನ್ನಲಾಗಿದೆ.
ಇತ್ತ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವೂ ಕೂಡ ಚುನಾವಣೆಗೆ ಸನ್ನದ್ಧವಾಗಿದ್ದು, ಇಂಡಿಯಾ ಕೂಟದ ಜೊತೆ ಸೀಟು ಹಂಚಿಕೆ ವಿಚಾರ ಇನ್ನು ಚರ್ಚೆಯಲ್ಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















