No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಕೇರಿಗಳ ಉದ್ಧಾರ ಆಗಿದೆಯಾ? ಸೌಕರ್ಯ ಕಲ್ಪಿಸಿದ್ದು ಯಾರು: ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2024
in ಶಿವಮೊಗ್ಗ
0
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿ ಎಲ್ಲಾ ವರ್ಗದ ಜನರ ಪಕ್ಷವಾಗಿದ್ದು, ಎಲ್ಲೂ ಕೂಡ ಜಾತಿ ನೋಡಲ್ಲ. ಕಾಂಗ್ರೆಸ್ ನವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಪಾರ್ಟಿ ಎಂದು ಬಿಂಬಿಸುತ್ತಾ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದದ್ದು ಬಿಟ್ಟರೆ ದಲಿತರ ಕಲ್ಯಾಣಕ್ಕೆ ಏನೂ ಮಾಡಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ K S Eshwarappa ಹೇಳಿದ್ದಾರೆ.

ಅವರು ಇಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಎಸ್.ಸಿ. ಮೋರ್ಚಾ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಒಂದು ಕಾಲದಲ್ಲಿ ಬಿಜೆಪಿ ಬ್ರಾಹ್ಮಣರ ಪಕ್ಷ ಎಂದಿತ್ತು. ಆದರೆ, ಈಗ ಪಾರ್ಟಿ ವಿಶ್ವದಲ್ಲೇ ಅತಿದೊಡ್ಡ ಪಕ್ಷವಾಗಿ ಬೆಳೆದಿದ್ದು ಎಲ್ಲಾ ಜಾತಿ ಧರ್ಮದವರಿಗೆ ಆದ್ಯತೆ ನೀಡಿದೆ. ಹಿಂದುಳಿದ ವರ್ಗದ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಿದ್ದು, ಡಾ. ಅಬ್ದುಲ್ ಕಲಾಂ ಅವರನ್ನು ಹಾಗೂ ಗುಡ್ಡಗಾಡು ಜನಾಂಗದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ ಎಂದರು.

ಕೇಂದ್ರ ಸಂಪುಟದಲ್ಲಿ 10 ಜನ ದಲಿತ, 37 ಜನ ಹಿಂದುಳಿದ ವರ್ಗದ ಮಂತ್ರಿಗಳಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರತಿಷ್ಠಾ ಕಾರ್ಯಕ್ರಮಕ್ಕೆ ದಲಿತರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ನವರು ಆರೋಪ ಮಾಡಿದರು. ಆದರೆ, ಇಟ್ಟಿಗೆ ಶಂಕುಸ್ಥಾಪನೆ ಮಾಡಿದ್ದೇ ದಲಿತ ನಾಯಕರು. ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ ನವರು ನಿಸ್ಸೀಮರು. ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಮಾದಾರ ಚನ್ನಯ್ಯ ಶ್ರೀಗಳು, ಕಾಗಿನೆಲೆ ಶ್ರೀಗಳು ಸೇರಿದಂತೆ ಹಲವಾರು ಹಿಂದುಳಿದ ವರ್ಗದ ಮಠಾಧೀಶರು ಭಾಗವಹಿಸಿ ಧನ್ಯತಾ ಮನೋಭಾವದಿಂದ ಹೇಳಿಕೆ ನೀಡಿದ್ದರು. ಆದರೂ ಕೂಡ ಕಾಂಗ್ರೆಸ್ ನವರು ಸುಳ್ಳು ಹೇಳುವುದನ್ನು ಬಿಟ್ಟಿಲ್ಲ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಎಲ್ಲಿದೆ ಎಂಬುದನ್ನು ಹುಡುಕಬೇಕಾಗಿದೆ. ಈಗಾಗಲೇ ಎಲ್ಲಾ ಸಮೀಕ್ಷೆಗಳು ಮೋದಿ ಸರ್ಕಾರ 400ಕ್ಕೂ ಹೆಚ್ಚು ಸ್ಥಾನ ಗಳಿಸುತ್ತದೆ. ಕಾಂಗ್ರೆಸ್ 35 ಸ್ಥಾನ ದಾಟುವುದಿಲ್ಲ ಎಂದಿವೆ. ಆದರೆ, ಇನ್ನು ಮುಂದೆ ದೇಶದಲ್ಲಿ ದಲಿತ, ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ನಿಂದ ಮೋಸ ಮಾಡಲು ಆಗುವುದಿಲ್ಲ. ಬಜೆಟ್ ನಲ್ಲಿ ದಲಿತರಿಗೆ ಇಟ್ಟ ಹಣ ಗ್ಯಾರಂಟಿಗಳಿಗೆ ಉಪಯೋಗಿಸಿ ಮುಸ್ಲಿಮರಿಗೆ ನೀಡಿದ್ದು, ಇದು ಯಾವ ನ್ಯಾಯ? ಬಿಜೆಪಿಯ ಎಸ್.ಸಿ. ಮೋರ್ಚಾ ಹಾಗೂ ಇನ್ನಿತರ ಎಲ್ಲಾ ಮೋರ್ಚಾಗಳು ಸದೃಢವಾಗಿವೆ. ತಲೆ ಎತ್ತಿ 10 ವರ್ಷದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತಿಳಿಸಿ ಎಂದರು.
ಹಿಂದೆ ಹಳ್ಳಿಗಳಿಗೆ ಮೂಲಸೌಲಭ್ಯ ಇಲ್ಲ, ನೀರು ತರಲು ಮೈಲುಗಟ್ಟಲೇ ಹೋಗಬೇಕು ಎಂದು ಹೆಣ್ಣು ಕೊಡುತ್ತಿರಲಿಲ್ಲ. ಆದರೆ, ಮೋದಿ ಸರ್ಕಾರ ಬಂದ ಮೇಲೆ ಪ್ರತಿ ಹಳ್ಳಿಗಳಿಗೆ ಗಂಗಾ ಕಲ್ಯಾಣ, ಹರ್ ಘರ್ ಮೆ ಜಲ್ ಯೋಜನೆಯಡಿ ನೀರು, ಸೋಲಾರ್ ವಿದ್ಯುತ್, ವಸತಿ, ಅನೇಕ ಸೌಲಭ್ಯ ನೀಡಿದೆ. ನಾವೆಲ್ಲರೂ ಹಿಂದೂಗಳು. ಸಮಾಜವನ್ನು ಒಟ್ಟು ಮಾಡಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಸಹಕರಿಸಿ ಎಂದರು.

Also read: ಮಾ.9: ವಿಪ್ರ ಸ್ನೇಹ ಬಳಗದಿಂದ ಯಡಿಯೂರಪ್ಪ, ರಾಘವೇಂದ್ರ ಅವರಿಗೆ ಸನ್ಮಾನ

ಮಾತೆತ್ತಿದರೆ ಅಂಬೇಡ್ಕರ್ ಎಂದು ಹೇಳುವ ಕಾಂಗ್ರೆಸ್ ನವರು ಅವರ ಸೋಲಿಗೆ ಕಾರಣರಾಗಿದ್ದರು ಎಂಬುದನ್ನು ಮರೆಯಬಾರದು. ಸಾಮಾಜಿಕ ನ್ಯಾಯ ಕೊಡಿಸುವುದೇ ಬಿಜೆಪಿಯ ಅಜೆಂಡಾ. ಚುನಾವಣೆ ಬಂದಾಗ ಕಾಂಗ್ರೆಸ್ ನವರಿಗೆ ದಲಿತರ ನೆನಪಾಗುತ್ತದೆ. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಎಂದು ಕೆಲವರು ಧ್ವನಿ ಎತ್ತಿದರೆ ಕೂಡಲೇ ದಲಿತರನ್ನು ಮುಖ್ಯಮಂತ್ರಿ ಮಾಡಿ ಎಂದು ಮಹದೇವಪ್ಪನವರ ಮೂಲಕ ಸಿದ್ಧರಾಮಯ್ಯ ಹೇಳಿಸುತ್ತಾರೆ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಲಿ ನೋಡೋಣ ಎಂದು ಸವಾಲು ಹಾಕಿದರು.

ದಲಿತರ ಮೀಸಲಿಟ್ಟ ಹಣವನ್ನು ಕಾಂಗ್ರೆಸ್ ಗ್ಯಾರಂಟಿಗೆ ವಿನಿಯೋಗಿಸಿ ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದು ಸಾಮಾಜಿಕ ನ್ಯಾಯಕ್ಕೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದು ಈಶ್ವರಪ್ಪ ಟೀಕಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಕೇರಿಗಳ ಉದ್ಧಾರ ಆಗಿದೆಯಾ? ಮೂಲ ಸೌಕರ್ಯ ಕಲ್ಪಿಸಿದ್ದು ಯಾರು ಎಂದು ದಲಿತ ಬಂಧುಗಳು ಚಿಂತಿಸಬೇಕು. ಎಸ್.ಸಿ. ಮೋರ್ಚಾ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ದಲಿತರಿಗೆ ನೀಡಿದ ಸೌಲಭ್ಯಗಳನ್ನು ಮನೆ ಮನೆಗೆ ತೆರಳಿ ಮನದಟ್ಟು ಮಾಡಿಸಬೇಕು ಎಂದು ಹೇಳಿದರು.
ಜಿಲ್ಲಾ ಎಸ್.ಸಿ. ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ್ ಕೋಹಳ್ಳಿ ಪ್ರಾಸ್ತವಿಕವಾಗಿ ಮಾತನಾಡಿ, ದೀನದಯಾಳ್ ಬೆಳಕು, ಸುಕನ್ಯಾ ಸಮೃದ್ಧಿ, ಪ್ರಧಾನ್ ಮಂತ್ರಿ ಆವಾಸ್ ಯೋಜನೆ, ಉದ್ಯೋಗ ಖಾತ್ರಿ ಯೋಜನೆ, ಜಲ ಜೀವನ್ ಮಿಷನ್, ಆಯುಷ್ಮಾನ್ ಭಾರತ್, ಡಿಜಿಟಲ್ ಇಂಡಿಯಾ, ಉಚಿತ ಔಷಧಿ ವಿತರಣೆ, ಸ್ವಚ್ಛ ಭಾರತ್ ಮಿಷನ್, ಗ್ರಾಮಗಳಿಗೆ ಕಸ ವಿಲೇವಾರಿ ಘಟಕಗಳು, ಸ್ತ್ರೀ ಶಕ್ತಿ ಸಂಘಗಳಿಗೆ ಬಡ್ಡಿ ರಹಿತ ಸಾಲ, ರೈತರಿಗೆ 6 ಸಾವಿರ ರೂ. ಸಹಾಯಧನ, ಎಲ್ಲಾ ವರ್ಗದ ಜನರಿಗೆ ಸಮುದಾಯ ಭವನಗಳು, ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ, ವಿಮಾನ ನಿಲ್ದಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮೋದಿ ಸರ್ಕಾರ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವಾಗ ಅನೇಕ ಕಾರ್ಯಗಳನ್ನು ಮಾಡಿದ್ದು, ದೊಡ್ಡ ಪಟ್ಟಿಯೇ ಇದೆ. ಕಾರ್ಯಕರ್ತರು ಇದನ್ನು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ವೇದಿಕೆಯಲ್ಲಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಪ್ರಮುಖರಾದ ಶಿವರಾಜ್, ವೀರಭದ್ರಪ್ಪ ಪೂಜಾರ್, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಮಾಜಿ ಮೇಯರ್ ಶಿವಕುಮಾರ್, ಬಸವರಾಜಪ್ಪ, ದೇವರಾಜ ನಾಯ್ಕ್ ಮಹದೇವಪ್ಪ, ವಿನ್ಸೆಂಟ್ ರೋಡ್ರಿಗಸ್, ರಾಜು, ಮೂರ್ತಿ, ಹೆಚ್.ಎನ್. ಮಂಜುನಾಥ್, ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

                  

Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಮಾ.9: ವಿಪ್ರ ಸ್ನೇಹ ಬಳಗದಿಂದ ಯಡಿಯೂರಪ್ಪ, ರಾಘವೇಂದ್ರ ಅವರಿಗೆ ಸನ್ಮಾನ

Next Post

ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ

ಆರ್ಮಿ ಕಪ್ 2024: ಮಾ.9ರಂದು ತಾಲೂಕು ಮಟ್ಟದ ಹಗ್ಗ ಜಗ್ಗಾಟ ಪಂದ್ಯಾವಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

ಯಮಹಾ ‘ದಿ ಕಾಲ್ ಆಫ್ ದಿ ಬ್ಲೂ’ ವಾರಾಂತ್ಯದ ಕಾರ್ಯಕ್ರಮದೊಂದಿಗೆ ಬೆಂಗಳೂರನ್ನು ರೋಮಾಂಚನಗೊಳಿಸಿತು

April 20, 2026
ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

ನಾರಿಶಕ್ತಿ ವಂದನಾ ಕಾಯ್ದೆ ವಿರುದ್ಧ ಮತಚಲಾವಣೆ ಮಹಿಳೆಗೆ ಮಾಡಿದ ಅಪಮಾನ: ಶಾಸಕ ಚನ್ನಬಸಪ್ಪ

April 18, 2026
ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಸಿಬಿಎಸ್‍ಇ 10th Result | ಪೋದಾರ್ ಶಾಲೆಗೆ ಶೇ.100ರಷ್ಟು ಫಲಿತಾಂಶ

April 18, 2026
ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದ KSRP ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ

April 18, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಹುಬ್ಬಳ್ಳಿ-ಅಲಿಪುರ್ ದ್ವಾರ್ ನಡುವೆ ವಿಶೇಷ ರೈಲು ಸೇವೆ ಮತ್ತೆ ವಿಸ್ತರಣೆ | ಇಲ್ಲಿದೆ ಡೀಟೇಲ್ಸ್

April 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL