ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಶಿವಮೊಗ್ಗದ FTSC-1 ನ್ಯಾಯಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಸಮಗ್ರ ಮಾಹಿತಿ:
2021ನೇ ಸಾಲಿನಲ್ಲಿ ಸೊರಬ ತಾಲ್ಲೂಕಿನ ವಾಸಿ 35 ವರ್ಷದ ವ್ಯಕ್ತಿಯು 14 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಈ ಬಗ್ಗೆ ನೊಂದ ಬಾಲಕಿಯು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಆಗಿನ ತನಿಖಾಧಿಕಾರಿಗಳಾದ ರಾಜಶೇಖರ್ ಎಲ್, ಪೊಲೀಸ್ ವೃತ್ತ ನಿರೀಕ್ಷಕರು, ಸೊರಬ ವೃತ್ತ ರವರು ಆರೋಪಿತನ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.
Also read: ಅಧಿಕಾರಿಗಳ ಅಸಡ್ಡೆ 3 ವರ್ಷವಾದರೂ ಉದ್ಘಾಟನೆಗೊಳ್ಳದ ನೀರಿನ ಟ್ಯಾಂಕ್ | ನೀರಿಗಾಗಿ ಪರದಾಟ
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್, ವಿಶೇಷ ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಶಿವಮೊಗ್ಗದ FTSC-1 ನ್ಯಾಯಲಯದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ನ್ಯಾಯಾಧಿಶರಾದ ಲತಾರವರು ದಿನಾಂಕಃ 06-03-2024ರಂದು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000/- ರೂ ದಂಡ, ದಂಡ ಕಟ್ಟಲು ವಿಫಲನಾದಲ್ಲಿ ಹೆಚ್ಚುವರಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು ಮತ್ತು ದಂಡದ ಮೊತ್ತದಲ್ಲಿ 50,000/- ರೂ ಹಾಗೂ ಸರ್ಕಾರದಿಂದ 4,00,000/- ರೂ ಸೇರಿ ಒಟ್ಟು 4,50,000/- ರೂ ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post