ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಹತ್ವದ ಬೆಳವಣಿಗೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಪೆಟ್ರೋಲ್ #Petrol ಹಾಗೂ ಡೀಸೆಲ್ ಮೇಲಿನ ದರವನ್ನು ಕಡಿತ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ.
ಕೇಂದ್ರ ಸರ್ಕಾರ ಇಂದು ಪೆಟ್ರೋಲ್ ಹಾಗೂ ಡೀಸೆಲ್ #Diesel ಮೇಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಎರಡರಲ್ಲೂ ಪ್ರತಿ ಲೀಟರ್’ಗೆ ಎರಡೂ ರೂಪಾಯಿಗಳನ್ನು ಕಡಿಮೆ ಮಾಡಿದೆ.
ಈ ಪರಿಷ್ಕೃತ ದರ ನಾಳೆ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
ಈ ಕುರಿತಂತೆ ಮಾಹಿತಿ ಪ್ರಕಟಿಸಿರುವ ಪೆಟ್ರೋಲಿಯಂ ಸಚಿವಾಲಯ, ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದಿದೆ.
ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವಂತೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್’ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post