ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮಾಡಲಾಗಿದ್ದು, ಈ ಕುರಿತಂತೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಬಾಲಕಿಯ ತಾಯಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸಂತ್ರಸ್ತೆಯ ತಾಯಿ ದೂರು ದಾಖಲಿಸಿದ್ದಾರೆ.
ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿz್ದÁಗ ತನಗೆ ಲೈಂಗಿಕ ಕಿರುಕುಳ ನೀಡಿz್ದÁಗಿ ಸಂತ್ರಸ್ತೆಯು ಎಫ್’ಐಆರ್’ನಲ್ಲಿ ಉ¯್ಲÉÃಖಿಸಿದ್ದಾಳೆ ಎಂದು ತಿಳಿದುಬಂದಿದೆ.
53 ಮಂದಿಯ ವಿರುದ್ಧ ಮಹಿಳೆಯಿಂದ ದೂರು!
ಯಡಿಯೂರಪ್ಪ ವಿರುದ್ಧ ಲೈಂಗಿಕ ದೌಜನ್ಯ ದೂರು ದಾಖಲಿಸಿರುವ ಮಹಿಳೆ 53 ಗಣ್ಯರ ವಿರುದ್ಧ ಇದೇ ರೀತಿ ಪ್ರಕರಣ ದಾಖಲಿಸಿದ್ದರು ಎಂದು ವರದಿಯಾಗಿದೆ.
ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















