ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಾರ್ಚ್ 25ರಿಂದ ಪ್ರಸಕ್ತ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆ SSLC Exam ನಡೆಯಲಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಡಿಡಿಪಿಐ ಪರಮೇಶ್ವರಪ್ಪ ತಿಳಿಸಿದ್ದಾರೆ.
ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಎಸ್’ಎಸ್’ಎಸ್’ಸಿ ಪರೀಕ್ಷೆ ಪೂರ್ವಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು.

ಮಾರ್ಚ್ 25 ರಂದು ಪ್ರಥಮ ಭಾಷೆ, ಮಾರ್ಚ್ 27 ರಂದು ಸಮಾಜ ವಿಜ್ಞಾನ, ಮಾರ್ಚ್ 30 ರಂದು ವಿಜ್ಞಾನ, ಏ.02 ರಂದು ಗಣಿತ, ಎಪ್ರಿಲ್ 4 ರಂದು ತೃತೀಯ ಭಾಷೆ ಮತ್ತು ಎಪ್ರಿಲ್ 06 ರಂದು ದ್ವಿತೀಯ ಭಾಷೆ ಪರೀಕ್ಷೆಗಳು ನಡೆಯಲಿವೆ.
ಎಷ್ಟು ವಿದ್ಯಾರ್ಥಿಗಳು ಬರೆಯಲಿದ್ದಾರೆ?
2023-24 ನೇ ಸಾಲಿಗೆ ಜಿಲ್ಲೆಯಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳು 22044, ಪುನರಾವರ್ತಿತ 1430, ಖಾಸಗಿ 384 ಮತ್ತು ಖಾಸಗಿ ಪುನರಾವರ್ತಿತ 144 ಸೇರಿದಂತೆ ಒಟ್ಟು 24002 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
Also read: ನಾವೇನು 6-7 ಕ್ಷೇತ್ರ ಕೇಳಿಲ್ಲ, ಕೇಳಿರೋದು 3-4 ಕ್ಷೇತ್ರ ಅಷ್ಟೇ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಜಿಲ್ಲೆಯಲ್ಲಿ ಒಟ್ಟು 78 ಪರೀಕ್ಷಾ ಕೇಂದ್ರಗಳು ಇದ್ದು, 78 ಮುಖ್ಯ ಅಧೀಕ್ಷಕರು, 24 ಉಪ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗಿದೆ. 102 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳು, 31 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಯಾವುದೇ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸದಂತೆ ಹಾಗೂ ಯಾವುದೇ ವಿದ್ಯುನ್ಮಾನ ಉಪಕರಣವನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿಷೇಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post