ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಗರತ್ ಪೇಟೆಯ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ನಡೆದ ಹಲ್ಲೆ Youth attacked for playing Hanuman Chalisa ಪ್ರಕರಣಕ್ಕೆ ಇಂದು ಬೇರೆಯದೇ ತಿರುವು ದೊರೆತಿದ್ದು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.
ಹಲ್ಲೆ ಮಾಡಿರುವ ಅನ್ಯಕೋಮಿನ ಯುವಕರನ್ನು ಬಂಧಿಸಬೇಕು ಹಾಗೂ ಹಲ್ಲೆ ನಡೆಸಿರುವ ಅಸಲಿ ಆರೋಪಿಗಳನ್ನು ರಕ್ಷಿಸಿ, ಬೇರೆ ಯುವಕರನ್ನು ಇದರಲ್ಲಿ ಒಳಪಡಿಸುವ ಹುನ್ನಾರ ನಡೆಯುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.
Also read: ಲೋಕಸಭಾ ಚುನಾವಣೆ ನಂತರ ದೇಶದಲ್ಲಿ ಕಾಂಗ್ರೆಸ್ ಇಬ್ಬಾಗವಾಗಲಿದೆ: ಬಸವರಾಜ ಬೊಮ್ಮಾಯಿ
ಅಂಗಡಿ ಮಾಲೀಕ ಮುಕೇಶ್ ಅವರು ಪ್ರತಿಭಟನಾ ರ‍್ಯಾಲಿಗೆ ಮುಂದಾಗುತ್ತಿದ್ದಂತೆ ಪೊಲೀಸರು ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಹೇಳಿ ಅವರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಸುರೇಶ್ ಕುಮಾರ್ ಅವರನ್ನೇ ಪೊಲೀಸರು ಎಳೆದಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅಂಗಡಿ ಮಾಲೀಕ ಮುಕೇಶ್, ನಾವು ಬೆಂಗಳೂರಿನಲ್ಲಿ ಇಲ್ಲ. ಹಿಂದೆ ಕಾಶ್ಮೀರದಲ್ಲಿ ಆದಂತೆ ಇಲ್ಲಿ ಆಗುತ್ತಿದೆ. ನಮ್ಮ ಮೇಲೆ ಇಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದು ಕಿಡಿಕಾರಿದರು.
ಈ ವೇಳೆ ಸ್ಥಳಕ್ಕಾಗಮಿಸಿದ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ತುಷ್ಟೀಕರಣ ನೀತಿ ಇಂತಹ ಕೃತ್ಯಗಳಿಗೆ ಪ್ರೇರಣೆ ನೀಡಿದೆ ಎಂದು ಕಿಡಿ ಕಾರಿದರು.
500ಕ್ಕೂ ಹೆಚ್ಚು ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post