ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹೆದರಿದ ಸರ್ವಾಧಿಕಾರಿಯಿಂದ ದೇಶದಲ್ಲಿ ಸತ್ತ ಪ್ರಜಾಪ್ರಭುತ್ವ ಸೃಷ್ಠಿ ಯತ್ನ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ #NarendraModi ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ #RahulGandhi ಪರೋಕ್ಷವಾಗಿ ಕಿಡಿ ಕಾರಿದ್ದಾರೆ.
ಇಡಿ ಅಧಿಕಾರಿಗಳು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ #AravindKejriwal ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, ಹೆದರಿರುವ ಸರ್ವಾಧಿಕಾರಿ ಸತ್ತ ಪ್ರಜಾಪ್ರಭುತ್ವವನ್ನು ಸೃಷ್ಟಿಸಲು ಬಯಸುತ್ತಾನೆ ಎಂದಿದ್ದಾರೆ.
ಮಾಧ್ಯಮ ಸೇರಿದಂತೆ ಎಲ್ಲಾ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವಾಗ, ಪಕ್ಷಗಳನ್ನು ಒಡೆಯುವಾಗ, ಕಂಪನಿಗಳಿಂದ ಹಣ ಸುಲಿಗೆ ಮಾಡುವಾಗ ಮತ್ತು ಪ್ರಮುಖ ವಿರೋಧ ಪಕ್ಷದ ಖಾತೆಯನ್ನು ಸ್ಥಗಿತಗೊಳಿಸುವುದು ಸಾಕಾಗಲಿಲ್ಲ. ದೆವ್ವದ ಶಕ್ತಿ, ಈಗ ಚುನಾಯಿತ ಮುಖ್ಯಮಂತ್ರಿಗಳ ಬಂಧನವೂ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದಿದ್ದಾರೆ.
ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಮತ್ತು ಆಪ್ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ನಿನ್ನೆ ರಾತ್ರಿ ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post