ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬದಲಾವಣೆಗಾಗಿ ನನಗೊಂದು ಅವಕಾಶ ಕೊಡಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್ Geetha Shivarajkumar ಹೇಳಿದರು.
ಅವರು ಇಂದು ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಾಲಯದಲ್ಲಿ ಕಾರ್ಯಕರ್ತರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪತಿ ಶಿವರಾಜ್‍ಕುಮಾರ್‍ರವರೊಂದಿಗೆ ಪೂಜೆ ಸಲ್ಲಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಹೋದ ಕಡೆಯಲೆಲ್ಲಾ ಉತ್ತಮ ವಾತಾವರಣ ಕಂಡು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಾರೆ. ಮಹಿಳೆಯರು ಕೂಡ ಹೆಚ್ಚಾಗಿ ಬರುತ್ತಿದ್ದಾರೆ. ಗೆದ್ದೆ ಗೆಲ್ಲುತ್ತೇನೆ ಎಂಬ ವಿಶ್ವಾಸ ನನಗಿದೆ. ನನಗೊಂದು ಅವಕಾಶ ಕೊಡಿ. ನಾನು ಖಂಡಿತ ಮತದಾರರ ಋಣವನ್ನು ತೀರಿಸುತ್ತೇನೆ ಎಂದರು.
Also read: ಹೋಳಿಯಲ್ಲಿ ಮಿಂದೆದ್ದ ಶಿವಮೊಗ್ಗ | ಬಣ್ಣದ ಲೋಕವಾಗಿತ್ತು ಗೋಪಿ ವೃತ್ತ | ಮುಗಿಲುಮುಟ್ಟಿದ ಸಂಭ್ರಮ
ಮಲೆನಾಡಿನ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಮೊದಲಿನಿಂದಲೂ ಈ ಬಗ್ಗೆ ನನಗೆ ಗೊತ್ತಿದೆ. ಅಡಕೆ ಬೆಳಗಾರರ ಸಮಸ್ಯೆ,ಮುಳುಗಡೆ ಸಂತ್ರಸ್ಥರ ಸಮಸ್ಯೆ, ಮಹಿಳೆಯರ ಸಮಸ್ಯೆಗಳು, ಸಾಗುವಳಿ ರೈತರ ಸಮಸ್ಯೆ, ಉದ್ಯೋಗದ ಸಮಸ್ಯೆ, ಕಾರ್ಖಾನೆಗಳ ಸಮಸ್ಯೆಗಳ ಬಗ್ಗೆ ಗೊತ್ತು. ಖಂಡಿತ ಇವೆಲವುಗಳನ್ನು ಪಟ್ಟಿ ಮಾಡಿಕೊಂಡಿರುವೆ ಎಂದರು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಈಗಾಗಲೇ ಅನುಷ್ಠಾನಗೊಂಡಿವೆ. ಇವು ನಮ್ಮ ಕೈಹಿಡಿಯಲಿವೆ. ಜೊತೆಗೆ ಕೇಂದ್ರ ಮಟ್ಟದ ಕಾಂಗ್ರೆಸ್‍ನ ಗ್ಯಾರಂಟಿಗಳು ಕೂಡ ಜೊತೆಗಿವೆ. ವಾತಾವರಣ ಚೆನ್ನಾಗಿದೆ. ಗೆಲ್ಲುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post