ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಪ್ರಧಾನಿ ಮೋದಿ ಅವರನ್ನು ದ್ವೇಷಿಸುತ್ತಲೇ ಇದ್ದೀರಿ. ನಿಮ್ಮ ಕೈಯಲ್ಲಿ ಅದೆಷ್ಟು ಶಕ್ತಿ ಇದೆ? ತೋರಿಸಿಬಿಡಿ ಒಂದ್ಸಾರಿ ನೋಡೋಣ! ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದರು.
ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಜೋಶಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಒಬ್ಬೊಬ್ಬರೇ ನಾಯಕರು ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುತ್ತಿದ್ದಾರೆ. ಸೇಡಿನ ಮನೋಭಾವ ತೋರುತ್ತಿದ್ದಾರೆ ಎಂದು ಆರೋಪಿಸಿದರು.


ಪ್ರಧಾನಿ ವಿರುದ್ಧ ಹೊಡಿ-ಬಡಿ ಸಂಸ್ಕಾರ ಹುಟ್ಟು ಹಾಕುತ್ತಿರುವ ಕಾಂಗ್ರೆಸ್ಸಿಗರಿಗೆ ದೇಶದ ಜನರೇ ಬುದ್ಧಿ ಕಲಿಸತ್ತಾರೆ ಎಂದು ಸಚಿವ ಜೋಶಿ ವಾಗ್ದಾಳಿ ನಡೆಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post