ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ರಾಮೇಶ್ವರಂ ಕೆಫೆ ಸ್ಪೋಟ #RameshwaramCafeBlast ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮೂರು ಜಿಲ್ಲೆಗಳಲ್ಲಿ ಎನ್’ಐಎಎ #NIA ಅಧಿಕಾರಿಗಳು ಇಂದು ಮುಂಜಾನೆಯೇ ದಾಳಿ ನಡೆಸಿ, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇಂದು ಬೆಳ್ಳಂಬೆಳಗ್ಗೆಯೇ ಶಿವಮೊಗ್ಗ, #Shivamogga ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ #Hubli ಎನ್’ಐಎ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಬೆಂಗಳೂರಿನ ಗುರಪ್ಪನ ಪಾಳ್ಯದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ #Thirthahalli ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿಯಲ್ಲಿ ದಾಳಿ ನಡೆಸಿರುವ ಎನ್‌ಐಎ ಅಧಿಕಾರಿಗಳ ತಂಡವು ಹಳೆ ಆರೋಪಿ ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್’ಗೆ ಸಹಾಯ ಮಾಡಿದ ಸಾಧಾರರ್ ನವೀದ್ ಎನ್ನುವವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್, ನವೀದ್ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post