ಕಲ್ಪ ಮೀಡಿಯಾ ಹೌಸ್ | ಹಾವೇರಿ |
ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಸಂದರ್ಭದಲ್ಲಿ ಹಾನಗಲ್ ತಾಲೂಕು ಮಾಸಣಕಟ್ಟಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಮಗೆ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಜನ ಬೆಂಬಲ ಕೊಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ PM Narendra Modi ಗಾಳಿ ಕರ್ನಾಟಕದ ಉದ್ದಗಲಕ್ಕೂ ಇದೆ ಎಂದರು.

Also read: ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ
ಹಲವು ಕ್ಷೇತ್ರಗಳಿಗೆ ಹಾಲಿ ಬಿಜೆಪಿ ಅಭ್ಯರ್ಥಿಗಳ ಬದಲಾವಣೆಗೆ ಒತ್ತಡ ಹೇರುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರಡಿ ಸಂಗಣ್ಣ ಅವರಿಗೆ ಮಾತಾಡಿದ್ದೇನೆ, ಅವರೂ ಪಕ್ಷದ ತೀರ್ಮಾನವನ್ನು ಒಪ್ಪಿಕೊಂಡಿದ್ದಾರೆ. ಇಂದು ಯಡಿಯೂರಪ್ಪನವರು ದಾವಣಗೆರೆಗೆ ಹೋಗುತ್ತಾರೆ, ದಾವಣಗೆರೆಯದ್ದೂ ಸರಿಯಾಗಲಿದೆ. ನಾಳೆ ಯಡಿಯೂರಪ್ಪ ಬೆಳಗಾವಿಗೆ ಹೋಗುತ್ತಾರೆ, ಅಲ್ಲಿಯೂ ಕೂಡಾ ಸರಿಯಾಗುತ್ತದೆ ಎಂದರು

ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಚುನಾವಣೆ ಯುದ್ದ ಭೂಮಿಯಲ್ಲಿ ಅವರವರ ರಣತಂತ್ರ ಅವರು ಮಾಡುತ್ತಾರೆ ನಮ್ಮ ರಣತಂತ್ರ ನಾವು ಮಾಡುತ್ತೇವೆ. ಜನ ಮಾಲೀಕರು, ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post