ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನ, ವಜ್ರ ಹಾಗೂ ಬೆಳ್ಳಿಯನ್ನು ತರೀಕೆರೆ #Tarikere ಬಳಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್’ನಲ್ಲಿ #CheckPost ತಪಾಸಣೆ ನಡೆಸುವ ವೇಳೆ ಯಾವುದೇ ರೀತಿಯಲ್ಲಿಯೂ ಸಹ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಮೌಲ್ಯಯುತ ವಸ್ತುಗಳನ್ನು ಸೀಜ್ ಮಾಡಲಾಗಿದೆ.
6 ಕೆಜಿ 586 ಗ್ರಾಂ ಚಿನ್ನ, 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ 873.731 ಗ್ರಾಂ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದು ತನಿಖೆ ನಡೆದಿದೆ.
ಟ್ರಕ್ ಮೂಲಕ ಬೆಂಗಳೂರಿನಿಂದ ಶಿವಮೊಗ್ಗ #Shivamogga ಜಿಲ್ಲೆಗೆ ಈ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ದೊರೆಯಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post