ಕಲ್ಪ ಮೀಡಿಯಾ ಹೌಸ್ | ಸಾಗರ |
ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ.
ಜೋಸೆಫ್ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಸೀಫ್ ಹಾಗೂ ಅನಜುಂ ಅವರ ಪುತ್ರಿ ಆನಮ್ ಫಾತಿಮಾ
(1.5 ವರ್ಷ) ಮೃತಪಟ್ಟ ದುರ್ದೈವಿ.
ಭಾನುವಾರ ಸಂಜೆ ಮಗು ಮನೆಯ ಬಾತ್ ರೂಮ್ ನೀರಿನ ಬಕೆಟ್‌ಗೆ ಆಕಸ್ಮಿಕವಾಗಿ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ.
ತಕ್ಷಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ವೈದ್ಯರು ಮಗು ಮೃತಪಟ್ಟಿರುವ ಬಗ್ಗೆ ಖಚಿತಪಡಿಸಿದ್ದಾರೆ. ಸಾಗರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















