ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಹಿರಿಯ ನಾಯಕ, ಮಾಜಿ ಎಂಎಲ್’ಸಿ ಆರ್. ಪ್ರಸನ್ನಕುಮಾರ್ #RPrasannakumar ಅವರನ್ನು ನಿಯೋಜಿಸಲಾಗಿದೆ.
ಈ ಕುರಿತಂತೆ ಕೆಪಿಸಿಸಿ #KPCC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್’ಗೆ ಪ್ರಸನ್ನ ಕುಮಾರ್ ಅವರನ್ನು ನೂತನ ಸಾರಥಿಯನ್ನಾಗಿ ನೇಮಿಸಿದ್ದಾರೆ.
ಡಿಸಿಸಿ ಅಧ್ಯಕ್ಷರಾಗಿದ್ದ ಸುಂದರೇಶ್ ಅವರು ಸೂಡಾ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನದ ಜವಾಬ್ದಾರಿಯನ್ನು ಪ್ರಸನ್ನಕುಮಾರ್ ಅವರಿಗೆ ವಹಿಸಲಾಗಿದೆ.
ಲೋಕಸಭಾ ಚುನಾವಣೆಗೆ ಘೋಷಣೆಯಾಗಿದ್ದು, ಮೇ 7ರಂದು ಮತದಾನ ನಡೆಯಲಿದೆ. ಇದೇ ವೇಳೆಯಲ್ಲಿ ಪ್ರಸನ್ನ ಕುಮಾರ್ ಅವರಿಗೆ ನೂತನ ಹೊಣೆ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿದಂತಾಗಿದೆ.
ಯುವ ಕಾಂಗ್ರೆಸ್’ನಿಂದ ಅಭಿನಂದನೆ
ಇನ್ನು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ಆರ್. ಪ್ರಸನ್ನ ಕುಮಾರ್ ಅವರಿಗೆ ಯುವ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಯುವ ಮುಖಂಡರಾದ ಕೆ. ರಂಗನಾಥ್ ಕೆಪಿವೈಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್, ಕೆಪಿವೈಸಿಸಿ ಕಾರ್ಯದರ್ಶಿ ಆರ್. ಕಿರಣ್ , ಟಿ.ವಿ. ರಂಜಿತ್, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಪ್ರಾಧಿಕಾರದ ಸದಸ್ಯರಾದ ಎಂ. ರಾಹುಲ್, ಶಿವಮೊಗ್ಗ ತಾಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಎಸ್. ಕುಮಾರೇಶ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ. ರಾಕೇಶ್ ಪುಷ್ಪಕ್ ಕುಮಾರ್, ಕೆ.ಎಲ್. ಪವನ್, ಮೋಹನ್ ಸೋಮಿನಕೊಪ್ಪ, ಸುಹಾಸ್ ಗೌಡ, ರಾಹುಲ್ ಸಿಗೆಹಟ್ಟಿ, ಎ.ಎಸ್. ಸಾಯಿಲ್ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post