No Result
View All Result
First VALORANT Campus Cup Champions Crowned
English Articles

First VALORANT Campus Cup Champions Crowned

by ಕಲ್ಪ ನ್ಯೂಸ್
April 15, 2026
0

Kalpa Media House  |  INDIA | The VALORANT Campus Cup (VCC) wrapped its inaugural edition with a Grand Finale that...

Read moreDetails
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
  • Advertise With Us
  • Grievances
  • About Us
  • Contact Us
Wednesday, April 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕಲಬುರಗಿ

ಉಸಿರಾಡುವುದಕ್ಕೆ ಒಂದನ್ನು ಬಿಟ್ಟು ಮಿಕ್ಕೆಲ್ಲವುಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ: ಪ್ರಿಯಾಂಕ್ ಖರ್ಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 2, 2024
in ಕಲಬುರಗಿ
0
ಉಸಿರಾಡುವುದಕ್ಕೆ ಒಂದನ್ನು ಬಿಟ್ಟು ಮಿಕ್ಕೆಲ್ಲವುಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ: ಪ್ರಿಯಾಂಕ್ ಖರ್ಗೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಲಬುರಗಿ  |

ನನಗೆ ಎಷ್ಟೇ ಜೀವಬೆದರಿಕೆಗಳು ಬರಲಿ, ಎದುರಿಸುತ್ತೇನೆ. ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ #Priyanka Kharge ಹೇಳಿದರು.

ಕಲಬುರಗಿ ನಗರದ ರಿಂಗ್ ರಸ್ತೆಯ ಮೊಘಲ್ ಗಾರ್ಡನ್ ನಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ದೇಶದ ಸ್ವಾತಂತ್ರ್ಯ ಹಿನ್ನಲೆ ಹಾಗೂ ಮಹಮ್ಮದ ಇಕ್ಬಾಲ್ ಬರೆದ ಹಾಗೂ ರವಿಶಂಕರ್ ಹಾಡಿದ ‘ಸಾರೇ ಜಹಾಂಸೆ ಅಚ್ಛಾ ಹಿಂದೂಸ್ಥಾನ ಹಮಾರಾ’ ಕವಿತೆ ಹುಟ್ಟಿದ ಸಂದರ್ಭದ ಬಗ್ಗೆ ವಿವರಿಸಿ ಮಾತನಾಡಿದ ಸಚಿವರು ಕವಿತೆಯ ಆಶಯದಂತೆ ನಾವೆಲ್ಲ ಒಂದೇ ಎನ್ನುವುದು ಕಾಂಗ್ರೆಸ್ ಪಕ್ಷದ ತತ್ವವಾಗಿದೆ. ಆದರೆ ಬಿಜೆಪಿಯ ತತ್ವ ಭಿನ್ನವಾಗಿದೆ. ಅದು ಧರ್ಮಗಳನ್ನು ವಿಭಾಗಿಸುವ ಕೆಲಸ ಮಾಡುತ್ತದೆ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉಪಯೋಗದ ಕುರಿತು ಮಾತನಾಡಿದ ಖರ್ಗೆ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಂದ ರಾಜ್ಯದ ಜನರಿಗೆ ಅನುಕೂಲವಾಗಿದೆ. ಆದರೆ, ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಎಲ್ಲಾ ಯೋಜನೆಗಳನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ. ಅವರನ್ನು ನೀವು ಅಧಿಕಾರಕ್ಕೆ ತರುತ್ತೀರಾ ? ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಗ್ಯಾರಂಟಿಗಳು ರೀಲ್, ಮೋದಿ ಗ್ಯಾರಂಟಿಗಳು ರಿಯಲ್ ಎನ್ನುವ ಸಂಸದ ಉಮೇಶ ಜಾಧವ್ ಅವರಿಗೆ ತರಾಟೆಗೆ ತೆಗೆದುಕೊಂಡ ಖರ್ಗೆ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೆವು ಇದು ರಿಯಲ್. ಆದರೆ, ನೀವು ಅಧಿಕಾರಕ್ಕೆ ಬಂದರೆ ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದೀರಿ ಅದು ರೀಲ್. ಯಾಕೆಂದರೆ ರೈತರ ಆದಾಯ ದ್ವಿಗುಣ ಮಾಡಲಿಲ್ಲ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದು ರೀಲ್ ಯಾಕೆಂದರೆ ಉದ್ಯೋಗ ಸೃಷ್ಟಿಸಲಿಲ್ಲ. ಆದರೆ, ಭರವಸೆ ನೀಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಿದ್ದೇವೆ ಅದು ರಿಯಲ್ . ಮೊಸರು ಖರೀದಿ ಮಾಡುವುದರಿಂದ ಹಿಡಿದು ಯಾವುದೇ ವಸ್ತು ತೆಗೆದುಕೊಂಡರೆ ಅದಕ್ಕೆ ಟ್ಯಾಕ್ಸ್ ಕಟ್ಟಲೇಬೇಕು. ಜನರು ಉಸಿರಾಡಲು ಮಾತ್ರ ಮೋದಿ ಟ್ಯಾಕ್ಸ್ ಹಾಕಿಲ್ಲ ಅದನ್ನು ಬಿಟ್ಟರೆ ಮಿಕ್ಕೆಲ್ಲವಕ್ಕೂ ಟ್ಯಾಕ್ಸ್ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದರು.

ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ ಲೀಡ್ ಕೊಟ್ಟಿದ್ದೀರಿ.ಈ ಸಲವೂ ಕೂಡಾ ಕನಿಷ್ಠ ಶೇ.90ರಷ್ಟು ಮತದಾನ ಮಾಡುವ ಮೂಲಕ ತಮ್ಮನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಕೆಕೆಆರ್ ಡಿಬಿ ಅಧ್ಯಕ್ಷ ಹಾಗೂ ಶಾಸಕ ಅಜಯ್ ಸಿಂಗ್ ಮಾತನಾಡಿ ಈ ಸಲದ ಚುನಾವಣೆ ರಾಷ್ಟ್ರ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿದೆ. ಇಲ್ಲಿ ರಾಧಾಕೃಷ್ಣ ಅವರು ಅಭ್ಯರ್ಥಿಯಾಗಿದ್ದರೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ನಡುವಿನ ಚುನಾವಣೆ ಯಾಗಿದೆ ಎಂದರು.
ಕೇಂದ್ರದ ಮೋದಿ #Modi ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸಲು ವಿಫಲವಾಗಿದೆ. ಕೇವಲ ಜಾತಿ ಜಾತಿಗಳ ನಡುವೆ ಜಗಳ ಹಚ್ಚಿ ಅವರನ್ನು ವಿಭಾಗಿಸುವ ಕೆಲಸ ಮಾಡುತ್ತಿದೆ. ಆ ಮೂಲಕ ಚುನಾವಣೆ ಎದುರಿಸುವ ತಂತ್ರ ಅನುಸರಿಸಲಾಗುತ್ತಿದೆ. ಆದರೆ ಈ ಸಲ ಹಾಗಾಗಲು ಬಿಡಬಾರದು. ಉತ್ತರ ಕ್ಷೇತ್ರದಿಂದ ಕನಿಷ್ಢ 40,000 ಮತಗಳ ಲೀಡ್ ಕೊಡಬೇಕು ಎಂದು ಮನವಿ ಮಾಡಿದರು.

Also read: ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಖಾಜಾ ಬಂದೇನವಾಜ್ ದರ್ಗಾದ ಸಾಬೇಬ್, ಡಾ ಮುಸ್ತಫಾ ಬಾಬಾ ಮಾತನಾಡಿ, ತಳಮಟ್ಟದಲ್ಲಿ ರಾಧಾಕೃಷ್ಣ ಅವರು ಕೆಲಸ ಮಾಡಿ ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ. ಶಾಸಕಿ ಕನೀಜ್ ಫಾತೀಮಾ ಅವರ ಮಾರ್ಗದರ್ಶನದಂತೆ ಎಲ್ಲರೂ ಕೆಲಸ ಮಾಡಿ ರಾಧಾಕೃಷ್ಣ ಅವರನ್ನು ಗೆಲ್ಲಿಸಬೇಕು ಎಂದರು.

ಸಚಿವ ಶರಣಪ್ರಕಾಶ ಪಾಟೀಲ ಮಾತನಾಡಿ, ಈ ಚುನಾವಣೆ ಸಂವಿಧಾನವನ್ನು ರಕ್ಷಿಸುವ ಚುನಾವಣೆಯಾಗಿದೆ. ಕಳೆದ 10 ವರ್ಷದ ದುರಾಡಳಿತವನ್ನು ಜನರು ಅನುಭವಿಸಿದ್ದಾರೆ. ಮೋದಿಯನ್ನು ಗಾಂಧಿ ಕುಟುಂಬದ ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತ್ರ ಎದುರಿಸಬಲ್ಲರು. ಈ ಸಲ ಮತ್ತೆ ಮೋದಿ ಪ್ರಧಾನಿಯಾದರೆ ಸಂವಿಧಾನದ ಆಶಯಗಳಿಗೆ ಧಕ್ಕೆ ಬರಲಿದೆ. ಅದಕ್ಕಾಗಿ, ಬಿಜೆಪಿಯನ್ನು ಸೋಲಿಸಿ ಎಂದರು.

ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಉತ್ತರ ಶಾಸಕಿ ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರು, ಮಜಹರ್ ಖಾನ್, ಶರಣು ಮೋದಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0024.mp4

    

Tags: KalburgiKannada NewsKannada News LiveKannada News OnlineKannada News WebsiteKannada WebsiteLatest News KannadaModiNews in KannadaNews KannadaPriyanka Khargeಕಲಬುರಗಿಪ್ರಿಯಾಂಕ್ ಖರ್ಗೆಮೋದಿ
Share197Tweet123Send
Previous Post

ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

Next Post

ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

ಅಂಬೇಡ್ಕರ್, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರು: ಪ್ರಾಚಾರ್ಯ ವಿಶ್ವನಾಥ

April 15, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

ಭಾರತೀಯ ವಾಯುಪಡೆಯೊಂದಿಗೆ ಜಿಇ ಏರೋಸ್ಪೇಸ್ ಒಪ್ಪಂದ 

April 15, 2026
ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

ಶಿಕಾರಿಪುರದಲ್ಲಿ ಬಸ್ ಪಲ್ಟಿ | ಗಾಯಾಳುಗಳಿಗೆ ವಿಜಯೇಂದ್ರ ಸಾಂತ್ವಾನ

April 14, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಯಶವಂತಪುರ – ನ್ಯೂ ಜಲ್ಪೈಗುರಿ ನಡುವೆ ವಿಶೇಷ ರೈಲು ಸೇವೆ

April 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL