ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಅವರು ರಾಜ್ಯದ ಜನರಲ್ಲಿ ಗೊಂದಲ ಸೃಷ್ಠಿ ಮಾಡುತ್ತಿದ್ದು, ಅವರಿಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ಖಡಕ್ ಆಗಿ ಹೇಳಿದ್ದಾರೆ.
ದೆಹಲಿಯಿಂದ ಹಿಂದಿರುಗಿದ ನಂತರ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿಜಯೇಂದ್ರ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಅವರಿಗೆ ಸೋಲಿನ ಭೀತಿ ಶುರುವಾಗಿದೆ. ಗೊಂದಲ ಸೃಷ್ಠಿಸುವ ಹೇಳಿಕೆ ನೀಡಿದರೆ ವಿಜಯೇಂದ್ರಗೆ ಬೇರೆಯದೇ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ ಎಂದಿದ್ದಾರೆ.

Also read: ವಿಜಯಪುರ | ಫಲಿಸಿದ ಪ್ರಾರ್ಥನೆ | ಬದುಕಿ ಬಂದ ಕೊಳವೆ ಬಾವಿಯಲ್ಲಿ ಬಿದ್ದಿದ್ದ 2 ವರ್ಷದ ಕೂಸು
ಕುಟುಂಬ ರಾಜಕಾರಣ ಕಾಂಗ್ರೆಸ್ ತರಹ ಕರ್ನಾಟಕದ ಬಿಜೆಪಿ ಪಕ್ಷದಲ್ಲಿದೆ. ಹಿಂದುತ್ವ ಪರವಾದ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ ನನ್ನ ಹಾಗೆ ಅನೇಕರಿಗೆ ಅನ್ಯಾಯವಾಗಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಅವರ ಬಳಿ ಉತ್ತರ ಇಲ್ಲ. ಹಾಗಾಗಿ ಭೇಟಿಯಾಗದೆ ಸ್ಪರ್ಧೆ ಮಾಡಲು ಸೂಚನೆ ಸಿಕ್ಕಂತಾಗಿದೆ ಎಂದಿದ್ದಾರೆ.

ನಾನು ಗೀತಾ ಶಿವರಾಜ್ ಕುಮಾರ್‌ಬಗ್ಗೆ ಹಗುರವಾಗಿ ಮಾತನಾಡುತ್ತಿಲ್ಲ. ಮಧು ಬಂಗಾರಪ್ಪ ಮನಸ್ಸು ಮುಟ್ಟಿಕೊಂಡು ಹೇಳಲಿ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ ಮಾಡುತ್ತಿಲ್ಲ ಎಂದು. ಗೀತಾ ಶಿವರಾಜ್ ಕುಮಾರ್ ಸೋದರಿ ಸಮಾನ ನಾನು ವೈಯಕ್ತಿಕವಾಗಿ ಟೀಕೆ ಮಾಡುತ್ತಿಲ್ಲ ರಾಜಕೀಯವಾಗಿ ಡಮ್ಮಿ ಕ್ಯಾಂಡಿಡೇಟ್ ಎಂದು ಹೇಳಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post