ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಲೋಕಸಭಾ ಚುನಾವಣೆಯ #Loksabha election ಬಿಜೆಪಿ ಅಭ್ಯರ್ಥಿ ಕಂಗನಾ ರಾಣಾವತ್ ರೇಟ್ ಎಷ್ಟು ಎಂದು ಕೈ ನಾಯಕಿ ಸುಪ್ರಿಯಾ ಶ್ರೀನಾಥ್ ಕೇಳಿದ್ದ ಪ್ರಕರಣದ ನಂತರ ಇಂತಹುದ್ದೇ ಕೀಳು ಮಟ್ಟದ ಹೇಳಿಕೆಯನ್ನು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ #Ranadeep Surjewala ನೀಡಿದ್ದು, ಈಗ ಮತ್ತೊಂದು ವಿವಾದವನ್ನು ಸೃಷ್ಠಿಸಿದೆ.
ಕೆಲವು ದಿನಗಳ ಹಿಂದೆ ಕಂಗನಾ ಫೋಟೋ ಹಾಕಿ ರೇಟ್ ಎಷ್ಟು ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಥ್ ಪೋಸ್ಟ್ ಮಾಡಿದ್ದರು. ಇದು ವಿವಾದ ಹಾಗೂ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಸುಪ್ರಿಯಾ ಅವರಿಗೆ ಚುನಾವಣಾ ಆಯೋಗ ನಿಷೇಧ ಹೇರಿತ್ತು.

Also read: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್’ಗೆ 24 ಲಕ್ಷ ರೂ. ದಂಡ | ಕಾರಣವೇನು?
ಈ ಕುರಿತಂತೆ ಬಿಜೆಪಿ ಐಟಿ ಸೆಲ್ ಮಾಜಿ ಮುಖ್ಯಸ್ಥೆ ಅಮಿತ್ ಮಾಳವೀಯಾ ಅವರು ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಬಿಜೆಪಿ ಸಂಸದೆ ಹೇಮಾ ಮಾಲಿನಿ ಅವರನ್ನು ಅವರ ಸೌಂದರ್ಯದ ಕಾರಣಕ್ಕಾಗಿಯೇ ಸಂಸದೆಯನ್ನಾಗಿ ಆಯ್ಕೆ ಮಾಡಲಾಗಿದೆ. ಲೋಕಸಭೆಯನ್ನೂ ಸಂಸದರು ಆಕೆಯನ್ನೇ ದುರುಗುಟ್ಟಿಕೊಂಡು ನೋಡುತ್ತಿರುತ್ತಾರೆ ಎಂದು ಹೇಳಿದ್ದರು.

ಬಿಜೆಪಿಯ ಅಮಿತ್ ಮಾಳವಿಯಾ ಅವರು ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಸುರ್ಜೇವಾಲಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರನ್ನು ನೆಕ್ಕುವ ಬಗ್ಗೆ ಯಾರು ಯೋಚನೆ ಮಾಡ್ತಾರೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post