ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ #Lok Sabha Election ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಅವರಿಗೆ ಬೆಂಬಲ ಸೂಚಿಸಿ ಜೆಡಿಎಸ್ ಶಿವಮೊಗ್ಗ ನಗರ ಘಟಕದ ವತಿಯಿಂದ ಏ.5ರ ನಾಳೆ ಬೆಳಿಗ್ಗೆ 11ಕ್ಕೆ ದೈವಜ್ಞ ಕಲ್ಯಾಣ ಮಂದಿರದಲ್ಲಿ ಬೂತ್ ಮತ್ತು ವಾರ್ಡ್ ಅಧ್ಯಕ್ಷರ, ಮುಖಂಡರ ಹಾಗೂ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್ ತಿಳಿಸಿದರು.
ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಭೆಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಕೋರ್ ಕಮಿಟಿ ಸದಸ್ಯ ಕೆ.ಬಿ.ಪ್ರಸನ್ನಕುಮಾರ್, ಶಾಸಕಿ ಶಾರದ ಪೂರ್ಯನಾಯ್ಕ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಹಾಗೂ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Also read: ಬರ್ತ್ ಡೇ ಸೆಲೆಬ್ರಷನ್’ಗೆ ಅಬುಧಾಬಿಗೆ ಹಾರಿದ ರಶ್ಮಿಕಾ ಮಂದಣ್ಣ
ರಾಜ್ಯದಲ್ಲಿ ಜೆಡಿಎಸ್-ಬಿಜೆಪಿಯೊಂದಿಗೆ ಪಕ್ಷ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ. ಎರಡು ಪಕ್ಷದವರು ಒಟ್ಟಿಗೆ ಸೇರಿ ಮತ ಯಾಚಿಸಲಾಗುವುದು ಎಂದ ಅವರು, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲಿತ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಸುಮಾರು 1.50ಲಕ್ಷಕ್ಕೂ ಹೆಚ್ಚು ಮತ ಬರುವಂತೆ ಒಟ್ಟಿಗೆ ಸೇರಿ ಮತಯಾಚಿಸಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post