ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಎರಡು ಅವಧಿಯಲ್ಲಿ ವಿಶ್ವವೇ ಮೆಚ್ಚುವಂತಹ ಆಡಳಿತ ನೀಡಿದೆ. ಸಮಸ್ತ ಭಾರತೀಯರ ಏಳಿಗೆಗೆ ಐತಿಹಾಸಿಕ ಯೋಜನೆಗಳು ಕಾರ್ಯರೂಪಕ್ಕೆ ಬಂದು ಈಗಾಗಲೇ ಅರ್ಹ ಫಲಾನುಭವಿಗಳಿಗೆ ತಲುಪಿ ಆರ್ಥಿಕವಾಗಿ ಸಬಲಗೊಂಡು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.
ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಸೊರಬ ಮಂಡಲದ ವತಿಯಿಂದ ಪಕ್ಷದ ಕಚೇರಿಯ ಆವರಣದಲ್ಲಿ ಇಂದು ಸಂಜೆ ಹಮ್ಮಿಕೊಂಡಿದ್ದ “ಪೇಜ್ ಪ್ರಮುಖ್ ಕಾರ್ಯಕರ್ತರ” ಬೃಹತ್ ಸಮಾವೇಶದಲ್ಲಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಇಂತಹ ಫಲಾನುಭವಿಗಳು ಪ್ರತಿ ಬೂತ್ ಮಟ್ಟದಲ್ಲಿ ಇದ್ದು ಬೂತ್ ಮಟ್ಟದ ಕಾರ್ಯಕರ್ತರು ಖುದ್ದು ಭೇಟಿ ಮಾಡಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ಸೂಚಿಸುವಂತೆ ಕಾರ್ಯನಿರ್ವಹಿಸಬೇಕು ಈ ಮೂಲಕ ಪಕ್ಷದ ಧ್ಯೇಯ ವಾಕ್ಯವಾದ “ಈ ಬಾರಿ ನಾನೂರು ಮೀರಿ” ಯೋಜನೆಗೆ ಬಲ ತುಂಬಬೇಕು ಎಂದು ಆಗ್ರಹಿಸಿದರು.
Also read: ಅಂಭುತೀರ್ಥ ಶ್ರೀರಾಮೇಶ್ವರ ದೇವಸ್ಥಾನಕ್ಕೆ ಈಶ್ವರಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ
ಕಳೆದ ಮೂರು ಅವಧಿಯಲ್ಲಿ ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡಿರುವ ಸಾಧನೆಯ ಪಟ್ಟಿಯನ್ನು ನೆರೆದಿದ್ದ ಕಾರ್ಯಕರ್ತರ ಮುಂದೆ ತೆರೆದಿಟ್ಟು ಭವಿಷ್ಯದಲ್ಲಿ ಇನ್ನಷ್ಟು ಬೃಹತ್ ಯೋಜನೆಗಳು ಜಿಲ್ಲೆಯಲ್ಲಿ ಜಾರಿಗೆ ತರುವ ಹಾಗೂ ಜಿಲ್ಲೆಯಲ್ಲಿ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಸುವ ಕಡೆಗೆ ಹೆಚ್ಚಿನ ಶ್ರಮ ವಹಿಸಿ ಅದರೆಡೆಗೆ ಶಕ್ತಿ ಮೀರಿ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು. ಹಾಗೂ ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಮತದಾರರಿಗೆ ಅಭಿವೃದ್ಧಿಯ ಮಾಹಿತಿ ತಲುಪಿಸುವಂತೆ ಈ ಮೂಲಕ ಅಭೂತಪೂರ್ವ ಗೆಲುವಿಗೆ ಸಹಕರಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಟಿ.ಡಿ. ಮೇಘರಾಜ್, ಕುಮಾರ್ ಬಂಗಾರಪ್ಪ, ಹಾಲಪ್ಪ, ಪ್ರಕಾಶ್, ರಘುಪತಿ ಭಟ್, ಡಿ.ಎಸ್. ಅರುಣ್ ಸೇರಿದಂತೆ ಪಕ್ಷದ ಅನೇಕ ಹಿರಿಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post