ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸ್ಕೌಟ್ಸ್ ಗೈಡ್ಸ್ ಮತ್ತು ಕಬ್ – ಬುಲ್‌ಬುಲ್ ವಿದ್ಯಾರ್ಥಿಗಳಿಗಾಗಿ ನಡೆದ ಎರಡು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಸಂಸ್ಥೆಯ ರೆ.ಫಾ.ಎಫ್.ಪಿ.ಎಸ್.ಮೋನಿಸ್ ಸಭಾಂಗಣದಲ್ಲಿ ನಡೆಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಜಾಲ್ಸೂರ್ ಅವರು ಮಾತನಾಡಿ, ಎರಡು ದಿನಗಳ ಬೇಸಿಗೆ ಶಿಬಿರವು ಉತ್ತಮ ರೀತಿಯಲ್ಲಿ ನಡೆದು ಬಂದಿದೆ. ಎಲ್ಲಾ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಲವಲವಿಕೆಯ ಸಹಭಾಗಿತ್ವ ಖುಷಿಯನ್ನು ನೀಡಿದೆ. ಇಂತಹ ಶಿಬಿರಗಳು ಮಕ್ಕಳಲ್ಲಿ ಉತ್ತಮ ನಾಯಕತ್ವದಿಂದ ಕೂಡಿದ ವ್ಯಕ್ತಿತ್ವ ಮೂಡಿಬರಲು ಸಹಕಾರಿ ಎಂದರು.

ಕ್ರೈಸ್ಟ್ ಕಿಂಗ್ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕರಾದ ಮೇರಿಯನ್ ಡಿಸೋಜಾರವರು ಕಾರ್ಯಕ್ರದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು. ಸಂಸ್ಥೆಯ ಪ್ರೌಢಶಾಲಾ ಮುಖ್ಯಶಿಕ್ಷಕರಾದ ಡೊಮಿನಿಕ್ ಅಂದ್ರಾದೆ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post