ಕಲ್ಪ ಮೀಡಿಯಾ ಹೌಸ್ | ಉಡುಪಿ |
ನಿಮ್ಮ ಮಕ್ಕಳಿಗೆ ಗುಣಮಟ್ಟದ ಪಿಯುಸಿ ಶಿಕ್ಷಣದ ಜೊತೆಯಲ್ಲಿಯೇ ಸಿಎ, ಸಿಎಸ್’ಇಇಟಿ ಸ್ಪರ್ಧಾತ್ಮಕ ಪರೀಕ್ಷಾ ಅತ್ಯುತ್ತಮ ಗುಣಮಟ್ಟದ ತರಬೇತಿಯನ್ನು ನಿರೀಕ್ಷಿಸುತ್ತಿದ್ದೀರಾ? ಹಾಗಾದರೆ, ನಿಮ್ಮ ಆಯ್ಕೆ ಕಾರ್ಕಳದ #Karkala ಕ್ರಿಯೇಟಿವ್ ಪಿಯು ಕಾಲೇಜು ಮಾತ್ರ ಆಗಿರಲಿ.
ಹೌದು… ಉಡುಪಿ #Udupi ಜಿಲ್ಲೆಯಲ್ಲಿಯೇ ಅಮೋಘ ಫಲಿತಾಂಶ ನೀಡುತ್ತಾ ಬಂದಿರುವ ಈ ಸಂಸ್ಥೆ, ವಿಜ್ಞಾನ ವಿಭಾಗ ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿಯೂ ರಾಜ್ಯಮಟ್ಟದಲ್ಲಿ ಅಗ್ರ ರ‍್ಯಾಂಕ್’ಗಳನ್ನು ಪಡೆದುಕೊಂಡಿದೆ.
ಪ್ರಮುಖವಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೊದಲ ದಿನದಿಂದಲೇ ತರಬೇತಿ ನೀಡುವುದು ಕ್ರಿಯೇಟಿವ್ ಕಾಲೇಜಿನ #CreativePUCollege ವಿಶೇಷವಾಗಿದೆ.
ಏಳು ಉಪನ್ಯಾಸಕರು ಸೇರಿಕೊಂಡು ನಿರ್ಮಿಸಿದ ಈ ಸಂಸ್ಥೆ ಇಂದು ರಾಜ್ಯಮಟ್ಟದಲ್ಲಿ ಅತ್ಯುತ್ತಮ ಕಾಲೇಜು ಎಂದು ಗುರುತಿಸಿಕೊಂಡಿದೆ. ಶೈಕ್ಷಣಿಕ ಮಾತ್ರವಲ್ಲದೆ ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ.
ರಾಜ್ಯದ ಹತ್ತರಲ್ಲಿ ವಾಣಿಜ್ಯ ವಿಭಾಗಕ್ಕೆ 3 ರ‍್ಯಾಂಕ್
2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಪ್ರತಿ ವರ್ಷವೂ ಶೇ.100 ರಷ್ಟು ಫಲಿತಾಂಶದ ಜೊತೆ ಅನಘ (ಮೂರನೇ ರ‍್ಯಾಂಕ್), ದಿವಿತ್ ಗೌಡ(ಏಳನೇ ರ‍್ಯಾಂಕ್) ಹಾಗೂ ಅಕ್ಷತಾ ಪೈ(ಹತ್ತನೇ ರ‍್ಯಾಂಕ್) ನ್ನು ಪಡೆದಿದ್ದಾರೆ.
ಸಿಎ ಫೌಂಡೇಷನ್ ಅರ್ಹತಾ ಪರೀಕ್ಷೆಯಲ್ಲಿ ಅಮೋಘ ಸಾಧನೆ
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ #CAFoundation ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 20 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು ಹೆಮ್ಮೆಯ ಸಂಗತಿಯಾಗಿದೆ.
ಪ್ರಥಮ ಪಿಯುಸಿಯಿಂದಲೇ ವಿಶೇಷ ತರಬೇತಿ ನೀಡುತ್ತಿದ್ದು, ಅತ್ಯುತ್ತಮ ಹಾಗೂ ಕಡಿಮೆ ಶುಲ್ಕದೊಂದಿಗೆ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತದೆ.
ಸಿಎಸ್’ಇಇಟಿ ಕಂಪನಿ ಸೆಕ್ರೆಟರಿ ಪರೀಕ್ಷೆಯಲ್ಲಿ ಪ್ರತಿ ವರ್ಷ ದಾಖಲೆ
ಐಸಿಎಸ್’ಐ #ICEI ನಡೆಸುವ ಕಂಪನಿ ಸೆಕ್ರೆಟರಿಯ ಅರ್ಹತಾ ಪರೀಕ್ಷೆಯಲ್ಲಿ ಈ ಶೈಕ್ಷಣಿಕ ವರ್ಷದ 23 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು ಕ್ರಿಯೇಟಿವ್ ಪಿಯು ಕಾಲೇಜಿನ ವಿಶೇಷವಾಗಿದೆ.
ಇಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ನಿರಂತರ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಾಗುತ್ತಿದೆ. ಇದಲ್ಲದೆ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಟ್ಯಾಲಿ ಪ್ರೈಮ್, ಪೈತಾನ್, ಕಮ್ಯುನಿಕೇಶನ್ ಸ್ಕಿಲ್ಸ್ ಬಗ್ಗೆ ತರಬೇತಿ ನೀಡಲಾಗುತ್ತದೆ.
ಇದರೊಂದಿಗೆ ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯ, ರಾಷ್ಟ್ರೀಯ ಸೇವಾ ಯೋಜನೆ, ಕೆಸರಾಟ ಪಾಠ, ಯಕ್ಷಗಾನ, ಕೈಗಾರಿಕೆ ಭೇಟಿ ಸಂಗೀತ ತರಬೇತಿ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರಗಳನ್ನು ನೀಡಲಾಗುತ್ತಿದೆ.
ವಿಶೇಷವಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲೂ ಸಹ ಸಜ್ಜುಗೊಳಿಸುವುದು ಕ್ರಿಯೇಟಿವ್ ಪಿಯು ಕಾಲೇಜಿನ ವಿಶೇಷತೆಯಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ದಾಖಲಾತಿಗಾಗಿ ಮೊ: 9606906466 ಗೆ ಸಂಪರ್ಕಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post