ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ್ವಿತೀಯ ಪಿಯುಸಿ ಫಲಿತಾಂಶ #Second PU Result ಇಂದು ಪ್ರಕಟಗೊಂಡಿದ್ದು, ಜಿಲ್ಲೆಯ ಪ್ರತಿಷ್ಠಿತ ಪೇಸ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ ರಾಜ್ಯಕ್ಕೇ 4ನೇ ರ‍್ಯಾಂಕ್ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪೇಸ್ ಕಾಲೇಜಿನ ವಿದ್ಯಾರ್ಥಿಯಾದ ಸಾತ್ವಿಕ್, ವಿಜ್ಞಾನ ವಿಭಾಗದಲ್ಲಿ 600ಕ್ಕೆ 595 ಅಂಕ ಗಳಿಸುವ ಮೂಲಕ ರಾಜ್ಯಕ್ಕೇ 4ನೇ ರ‍್ಯಾಂಕ್ ಗಳಿಸಿದ್ದಾರೆ.
ಈ ಪ್ರತಿಭಾನ್ವಿತ ವಿದ್ಯಾರ್ಥಿ ಯೋಗೇಶ್ ಹಾಗೂ ಅಪರ್ಣಾ ದಂಪತಿ ಪುತ್ರ. ಮಗನ ಈ ಸಾಧನೆಯನ್ನು ಸಂಭ್ರಮಿಸಿದ ಆತನ ತಾಯಿ ಅಪರ್ಣಾ ಯೋಗೇಶ್ ಅವರು ಸಿಹಿ ತಿನ್ನಿಸಿ ಹಂಚಿಕೊಂಡರು.
Also read: ಪಿಯು ಫಲಿತಾಂಶ | ಪತ್ರಕರ್ತ ಹೊನ್ನಾಳಿ ಚಂದ್ರಶೇಖರ್ ಪುತ್ರಿ ಚುಕ್ಕಿ ರಾಜ್ಯಕ್ಕೇ 4ನೇ ರ‍್ಯಾಂಕ್
ಸಾತ್ವಿಕ್, ಆತನ ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕ ವರ್ಗದವರನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಒಟ್ಟಾರೆ ಫಲಿತಾಂಶದಲ್ಲಿ ಜಿಲ್ಲೆಯು ಎಂಟನೇ ಸ್ಥಾನ ಪಡೆದಿದ್ದು ಶೇ.88.58ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















