ಕಲ್ಪ ಮೀಡಿಯಾ ಹೌಸ್ | ಮುಂಬೈ |
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸದ ಮುಂದೆ ಇಂದು ನಸುಕಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಗುಂಡಿನ ದಾಳಿ ನಡೆಸಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮುಂಬೈನ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ನಿವಾಸದ ಮುಂದೆ ನಸುಕಿನ 5 ಗಂಟೆ ವೇಳೆಗೆ ಬೈಕ್’ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಹಲವು ಸುತ್ತಿನ ಗುಂಡು ಹಾರಿಸಿ, ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೊಯ್ ಹತ್ಯೆ ಮಾಡಬೇಕೆಂದು ಯೋಜನೆ ರೂಪಿಸಿದ್ದ ಪ್ರಮುಖ 10 ವ್ಯಕ್ತಿಗಳಲ್ಲಿ ನಟ ಸನ್ಮಾನ್ ಖಾನ್ ಕೂಡ ಸೇರಿದ್ದಾರೆ ಎಂದು ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆ ಬಹಿರಂಗಪಡಿಸಿತ್ತು.

ಬಿಷ್ಣೋಯ್ ತನ್ನ ಸಹಾಯಕನಾದ ಸಂಪತ್ ನೆಹ್ರಾ ಮೂಲಕ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾನೆ ಎಂದು ತನಿಖೆಯಿಂದ ಬಹಿರಂಗವಾಗಿತ್ತು. ಸಂಪತ್ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post