ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನನಗೆ ಶಾಸಕನಾಗಿ ಸೇವೆ ಮಾಡಲು ನಾಲ್ಕನೇ ಬಾರಿ ಅವಕಾಶ ನೀಡಿದ ಹಾಗೆಯೇ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwar ಮನವಿ ಮಾಡಿದರು.
ಹಿರಿಯೂರು ಜಿಪಂ ವ್ಯಾಪ್ತಿಯ ಅಂತರಗಂಗೆ, ಬಾರಂದೂರು, ಕಾಂಗ್ರೆಸ್ #Congress ಮುಖಂಡರು ಮತ್ತು ಕಾರ್ಯಕರ್ತರ ಬೃಹತ್ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
Also read: ಕಾದ ಕಾವಲಿಯಂತಿದ್ದ ಶಿವಮೊಗ್ಗ ನಗರಕ್ಕೆ ತಂಪೆರೆದ ಮಳೆರಾಯ

ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಜಿಲ್ಲೆಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮನ್ನು ಕ್ಷೇತ್ರಕ್ಕೆ ನಾಲ್ಕು ಬಾರಿ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದೀರ. ಅದೇ ರೀತಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರಿಗೂ ಅವಕಾಶ ಮಾಡಿಕೊಡಿ ಎಂದು ಕೋರಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post