ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಅವರ ನಾಮ ಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲ್ಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ #Madhu Bangarappa ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಮೆರವಣಿಗೆಯನ್ನು ಬೃಹತ್ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕ್ಯಾಂಟರ್ ಲಾರಿಗಳಲ್ಲಿ ಈ ಎಲ್‌ಇಡಿ ಪರದೆಗಳನ್ನು ಇರಿಸಲಾಗಿತ್ತು. ಗಾಂಧಿ ಬಜಾರ್‌ನಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಎಲ್‌ಇಡಿ ಪರದೆ ಕೆಳಗೆ ಬಿದ್ದಿದೆ. ಈ ವೇಳೆ ವಾಹನದ ಪಕ್ಕದಲ್ಲಿ ನಡೆದು ಸಾಗುತ್ತಿದ್ದ ಕೆಲವರು ಗಾಯಗೊಂಡಿದ್ದರು. ಗಾಯಳುಗಳನ್ನು ಮೆಗ್ಗಾನ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಷಯ ತಿಳಿದ ಬಳಿಕ ಸಚಿವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
Also read: ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ವೇಳೆ ಬಿದ್ದ ಎಲ್’ಇಡಿ ಸ್ಕ್ರೀನ್ | ಮೂವರಿಗೆ ಗಾಯ
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಆರ್.ಪ್ರಸನ್ನ ಕುಮಾರ್, ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post