ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ನಿಮ್ಮ ಮಕ್ಕಳಿಗೆ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಓದಿಸುವ ಕನಸು ಹೊತ್ತಿದ್ದೀರಾ? ನಿಮ್ಮ ಮಕ್ಕಳು ಪ್ರತಿಭಾವಂತರಾಗಿದ್ದಾರಾ? ಹೆಚ್ಚಿನ ಶುಲ್ಕ ಪಾವತಿಸಲು ಕಷ್ಟವಾಗುತ್ತಿದೆಯಾ? ಹಾಗಾದರೆ, ನಿಮ್ಮ ಕನಸಿಗೆ ಬೆನ್ನಲುಬಾಗಲಿದೆ ಕಾರ್ಕಳದ ಪ್ರತಿಷ್ಠಿತ ಕ್ರೈಸ್ಟ್ ಕಿಂಗ್ ಕಾಲೇಜು. #ChristKingCollege
ಹೌದು… ನಗರ ಹಾಗೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ಶುಲ್ಕದೊಂದಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರ್ಕಳದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜು ಮತ್ತೊಮ್ಮೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಕ್ಕೆ ಉಚಿತ ಮತ್ತು ರಿಯಾಯಿತಿ ದರದ ಶಿಕ್ಷಣಕ್ಕಾಗಿ ದಾಖಲಾತಿ ಆರಂಭಿಸಿದೆ.

ನಿರಂತರ ದಾಖಲೆಯ ಫಲಿತಾಂಶ
ಉಡುಪಿ #Udupi ಜಿಲ್ಲೆಯಲ್ಲಿಯೇ ಶ್ರೇಷ್ಠ ಫಲಿತಾಂಶವನ್ನು ನಿರಂತರವಾಗಿ ನೀಡುತ್ತಾ ಬರುತ್ತಿರುವ ಸಂಸ್ಥೆ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳೆರಡರಲ್ಲಿಯೂ ನಿರಂತರವಾಗಿ 100% ಫಲಿತಾಂಶ ದಾಖಲಿಸುತ್ತಾ ಬಂದಿದೆ. ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳೆರಡರಲ್ಲಿಯೂ ರಾಜ್ಯ ಮಟ್ಟದಲ್ಲಿ ಅಗ್ರ ಹತ್ತು ರ‍್ಯಾಂಕ್‌ನೊಳಗೆ ಪ್ರತೀ ವರ್ಷ 3 ರಿಂದ 5 ವಿದ್ಯಾರ್ಥಿಗಳು ರ‍್ಯಾಂಕ್‌ಗಳನ್ನು ಪಡೆಯುತ್ತಿದ್ದಾರೆ.
ವಿವಿಧ ಕೋರ್ಸ್’ಗಳಿಗೆ ಆಯ್ಕೆ
ಈ ಸಂಸ್ಥೆಯಲ್ಲಿ ಪ್ರಥಮ ಪಿಯುಸಿ ದಾಖಲಾತಿಗಾಗಿ ಅಂಕಗಳ ಮಿತಿ ಇರುವುದಿಲ್ಲ. ಉತ್ತಮ ಭವಿಷ್ಯಕ್ಕಾಗಿ ಶಿಕ್ಷಣವನ್ನರಸಿ ಬರುವ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೆ ದಾಖಲಾತಿ ನೀಡಿಯೂ ನಿರಂತರ ನೂರು ಶೇಖಡ ಫಲಿತಾಂಶ ದಾಖಲಿಸುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಬದ್ಧತೆಗೆ ಹಿಡಿದ ಕೈಗನ್ನಡಿಯಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ತರಗತಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದ್ದು ಪ್ರತೀ ವರ್ಷ 80% ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್, ಅರೆ ವೈದ್ಯಕೀಯ, ಕೃಷಿ ಹಾಗೂ ತೋಟಗಾರಿಕಾ ಕೋರ್ಸ್’ಗಳಿಗೆ ಆಯ್ಕೆಯಾಗುತ್ತಾರೆ.
ಆಧುನಿಕ ತಂತ್ರಜ್ಞಾನದ ಲ್ಯಾಬ್ ಸೌಲಭ್ಯ
ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿಎ ಹಾಗೂ ಸಿಎಸ್ ಫೌಂಡೇಷನ್ ತರಬೇತಿಗಳನ್ನು ನೀಡಲಾಗುತ್ತದೆ. ಈಗ ಎಲ್ಲಾ ಆಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಇದರಲ್ಲಿ ಆಧುನಿಕ ತಂತ್ರಜ್ಞಾನವನ್ನೊಳಗೊಂಡ ಲ್ಯಾಬ್‌ಗಳು, ಕಂಪ್ಯೂಟರ್ ಲ್ಯಾಬ್, ವಿಶಾಲ ಗ್ರಂಥಾಲಯ, ಕಿರು ಸಿನಿಮಾ ಮಂದಿರ, ಬೃಹತ್ ಸಭಾಂಗಣ ವ್ಯವಸ್ಥೆಗಳು ಇರಲಿವೆ.
ಹುಡುಗರಿಗೆ ಮತ್ತು ಹುಡುಗಿಯರಿಗೆ ಹಾಸ್ಟೆಲ್ ವ್ಯವಸ್ಥೆ ಇದ್ದು ಹುಡುಗಿಯರಿಗಾಗಿ ಹೊಸ ಹಾಸ್ಟೆಲ್ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ವಿವಿಧ ರೀತಿಯ ತರಬೇತಿ
ಅನುಭವಿ ಹಾಗೂ ನುರಿತ ಬೋಧಕ ವೃಂದದವರನ್ನು ಹೊಂದಿರುವ ಸಂಸ್ಥೆಯು ವಿದ್ಯಾರ್ಥಿಗಳ ಕಲಿಕೆಯ ಮೇಲೆ ನಿರಂತರ ನಿಗಾವಹಿಸುತ್ತಿದೆ.
ವಿದ್ಯಾರ್ಥಿಗಳಿಗೆ ಕ್ರೀಡೆ, ಸಾಂಸ್ಕೃತಿಕ, ಸಾಹಿತ್ಯಿಕವಾಗಿ ತರಬೇತಿಗಳನ್ನು ನೀಡಲಾಗುತ್ತದೆ. ವಿಜ್ಞಾನ ಮಾದರಿ, ಆ್ಯಂಕರಿಂಗ್, ನ್ಯೂಸ್ ರೀಡಿಂಗ್, ನೃತ್ಯ ಮುಂತಾದ ತರಬೇತಿ ವಿದ್ಯಾರ್ಥಿಗಳಿಗೆ ಲಭ್ಯವಿದೆ. ನಾಯಕತ್ವ ಗುಣ ಬೆಳೆಸುವ ದೃಷ್ಟಿಯಿಂದ ರಾಷ್ಟ್ರೀಯ ಸೇವಾ ಯೋಜನೆ, ರೋವರ‍್ಸ್ ಮತ್ತು ರೇಂಜರ‍್ಸ್ ದಳಗಳನ್ನು ನಡೆಸಲಾಗುತ್ತಿದೆ.

ಇದೇ ಸಂಸ್ಥೆಯಲ್ಲಿ ಪೂರ್ವ ಪ್ರಾಥಮಿಕದಿಂದ (ಎಲ್‌ಕೆಜಿ) ಪ್ರೌಢಶಾಲಾ ವಿಭಾಗ ಕೂಡಾ ಇದ್ದು ಆಂಗ್ಲಮಾಧ್ಯಮದಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ವಿದ್ಯಾಥಿಗಳಿಗೆ ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ಇತರ ತರಬೇತಿಗಳನ್ನು ನೀಡಲಾಗುತ್ತದೆ.
ಕೌಶಲ್ಯಾಭಿವೃದ್ಧಿ, ಕಲಾ ತರಬೇತಿ
ಯಕ್ಷಗಾನ, ಭರತನಾಟ್ಯ, ಸಂಗೀತ, ಚೆಂಡೆ, ಬ್ಯಾಂಡ್ ತರಬೇತಿ ನೀಡಲಾಗುತ್ತದೆ. ಕ್ರೀಡಾಕ್ಷೇತ್ರಕ್ಕೆ ಸಂಬಂಧಿಸಿದಂತೆ ಚೆಸ್, ಟೇಬಲ್ ಟೆನ್ನಿಸ್, ಶಟಲ್ ಬ್ಯಾಡ್ಮಿಂಟನ್, ಕರಾಟೆ, ಅಥ್ಲೆಟಿಕ್ಸ್, ಫುಟ್ ಬಾಲ್, ಕ್ರಿಕೆಟ್ ಮುಂತಾದ ತರಬೇತಿಗನ್ನು ನೀಡಲಾಗುತ್ತದೆ. ಜೊತೆಗೆ ಮಕ್ಕಳನ್ನು ಭವಿಷ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೆತುಗೊಳಿಸುವ ನಿಟ್ಟಿನಲ್ಲಿ ಕೌಶಲಾಭಿವೃದ್ಧಿ ಹಾಗೂ ಫೌಂಡೇಷನ್ ತರಗತಿಗಳನ್ನು ನಡೆಸಲಾಗುತ್ತದೆ.
ದಾಖಲಾತಿಗಾಗಿ ಇಂದೇ ಸಂಪರ್ಕಿಸಿ: 9019267068, 7975295758, 8310491693.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post