ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಂದು ಇಹಲೋಕ ತ್ಯಜಿಸಿದ ಕನ್ನಡ ಚಿತ್ರರಂಗದ ಕುಳ್ಳ, ಹಿರಿಯ ನಟ ದ್ವಾರಕೀಶ್ #ActorDwarakeesh ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ #RavindraKalakshetra ನಡೆಯಲಿದ್ದು, ಆನಂತರ ಚಾಮರಾಜಪೇಟೆಯ ಟಿಆರ್ ಮಿಲ್’ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ನಾಳೆ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಆನಂತರ ಅಂತ್ಯಕ್ರಿಯೆ ನಡೆಯಲಿದೆ.
ನಾಳೆ ಸ್ವಯಂಪ್ರೇರಿತ ಬಂದ್
ಇನ್ನು, ಈ ಕುರಿತಂತೆ ಮಾತನಾಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವಾಗಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹಾಗಾಗಿ ನಾಳೆ ಚಿತ್ರರಂಗ ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.
ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತ ಕೇಳಿಕೊಳ್ಳುತ್ತೇನೆ. ಅವರು ಎಲ್ಲರಿಗೂ ದೊಡ್ಡ ಆಸ್ತಿ. ಅಂತ್ಯಕ್ರಿಯೆ ಬಗ್ಗೆ ಸರ್ಕಾರದ ಜೊತೆ ಮಾತನಾಡಿದ್ದೇವೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post