ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುಪಿಎಸ್‌ಸಿ ಪರೀಕ್ಷೆ ಫಲಿತಾಂಶ #UPSC Exam Result ಪ್ರಕಟವಾಗಿದ್ದು, ಶಿವಮೊಗ್ಗದ ಐ.ಎನ್. ಮೇಘನಾ 589ನೇ ರ‍್ಯಾಂಕ್ ಪಡೆದಿದ್ದಾರೆ.
ನಿವೃತ್ತ ಡಿಸಿಎಫ್ ಐ.ಎಂ. ನಾಗರಾಜ್ ಹಾಗೂ ಜಿ.ಜಿ. ನಮಿತಾ ದಂಪತಿ ಪುತ್ರಿ ಮೇಘನಾ, ಕಳೆದ ವರ್ಷ ಯುಪಿಎಸ್‌ಸಿ ಪರೀಕ್ಷೆಯಲ್ಲಿ 617ನೇ ರ‍್ಯಾಂಕ್ ಪಡೆದಿದ್ದರು. ಅವರು, ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿಯಾಗಿ ತರಬೇತಿ ಪಡೆಯುತ್ತಿದ್ದಾರೆ. ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತಮ ರ‍್ಯಾಂಕ್ ಪಡೆದಿದ್ದು ಐಎಎಸ್ ಹುದ್ದೆಯ ನಿರೀಕ್ಷೆಯಲ್ಲಿದ್ದಾರೆ.
Also read: ಡಿಕೆಶಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಭದ್ರತಾ ಲೋಪಕ್ಕೆ ಕಾರಣರಾದ ಅಧಿಕಾರಿಗಳ ಅಮಾನತಿಗೆ ಮನವಿ
ಮೈಸೂರು ಜಿಲ್ಲೆ ಬಂಡೀಪುರ ಮತ್ತು ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಶಿವಮೊಗ್ಗದ ಸಾಂದೀಪನಿ ಇಂಗ್ಲಿಷ್ ಶಾಲೆಯಲ್ಲಿ ಪ್ರೌಢಶಿಕ್ಷಣ, ಶಿವಮೊಗ್ಗದ ಪೇಸ್ ಕಾಲೇಜಿನಲ್ಲಿ ಪಿಯುಸಿ ಹಾಗೂ ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















