ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಾತಿ ಧರ್ಮದ ಹೆಸರಿನಲ್ಲಿ ಬಿಜೆಪಿಯವರು ಮತ ಕೇಳುತ್ತಿದ್ದು, ಇದರಿಂದ ಜನಸಾಮಾನ್ಯರ ಕಷ್ಟಗಳು ನೀಗುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ #Madhu Bangarappa ಟೀಕಿಸಿದರು.
ಹೊಳೆಬೆನವಳ್ಳಿ, ಪಿಳ್ಳಂಗಿರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಪರ ಮತಯಾಚನೆ ಸಭೆಯಲ್ಲಿ ಮಾತನಾಡಿದರು.
ಬಿಜೆಪಿಯವರು ರಾಮ ಹಾಗೂ ಧರ್ಮದ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ. ಆದರೆ, ಇದರಿಂದ ಜನರ ಕಷ್ಟಗಳು ಯಾವ ರೀತಿ ನೀಗುತ್ತವೆ ಎಂದು ಪ್ರಶ್ನಿಸಿದರು.
ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಬಿಜೆಪಿಯವರು ಕೇಳುತ್ತಾರೆ. ನೀರು, ಸೂರು, ವಿದ್ಯುತ್, ರಸ್ತೆ, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ ಎಂದು ಪ್ರಶ್ನಿಸಿದರು.
ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಮಾತನಾಡಿ, ನಮ್ಮ ಸರ್ಕಾರ ಜಾರಿಗೊಳಿಸಿರುವ ಎಲ್ಲ ಗ್ಯಾರಂಟಿ ಯೋಜನೆಗಳು ಐದು ವರ್ಷದವರೆಗೂ ಚಾಲ್ತಿಯಲ್ಲಿರುತ್ತವೆ. ಲೋಕಸಭೆ ಚುನಾವಣೆ ನಂತರ ಈ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂಬ ವಿರೋಧ ಪಕ್ಷದವರ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬಾರದು ಎಂದರು.
Also read: ಸಂಸದರ ಟೆಂಪಲ್ ರನ್ | ರಾಘವೇಂದ್ರರಿಗೆ ಕುರಿ, ಕಂಬಳಿ ಗಿಫ್ಟ್ | ಹೇಗಿತ್ತು ಇಡೀ ದಿನದ ಕಾರ್ಯಕ್ರಮ?
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿ, ಹಿಂದೆ ಬಂಗಾರಪ್ಪನವರು ಜಾರಿಗೆ ತಂದಿದ್ದ ಯೋಜನೆಗಳಿಂದಾಗಿ ಇಂದು ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಅವುಗಳನ್ನು ಮುಂದುವರೆಸಿಕೊAಡು ಹೋಗಲು ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ಶ್ರೀನಿವಾಸ್ ಕರಿಯಣ್ಣ, ಆರ್. ರವಿ ಕುಮಾರ್, ವೇದಾ ವಿಜಯ್ ಕುಮಾರ್, ರಮೇಶ್ ಕುಬಟೆ, ಎಸ್. ರವಿಕುಮಾರ್, ರಮೇಶ, ಹನುಮಂತ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post