ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ #B Y Raghavendra ಇಂದು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮೊದಲು ನಡೆದ ಅದ್ದೂರಿ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ ನಡೆಯಿತು.
ಇಂದು ಮುಂಜಾನೆ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಿ.ವೈ. ರಾಘವೇಂದ್ರ ಅವರು ಅಲ್ಲಿಂದ ಮೆರವಣಿಗೆಯಲ್ಲಿ ಹೊರಟರು.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, #B S Yadiyurappa ಎಚ್.ಡಿ. ಕುಮಾರಸ್ವಾಮಿ, #H D Kumaraswamy ಬಸವರಾಜ ಬೊಮ್ಮಾಯಿ, #Basavaraja Bommai ಬಿಜೆಪಿ ಪ್ರಮುಖರಾದ ಮಾಳವಿಕಾ ಅವಿನಾಶ್, ಕುಮಾರ್ ಬಂಗಾರಪ್ಪ, ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಗುರುರಾಜ ಗಂಟಿಹೊಳಿ, ಎಸ್. ರುದ್ರೇಗೌಡ ಸೇರಿದಂತೆ ಹಲವು ನಾಯಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
Also read: ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ನಾಳೆ ನಗರಕ್ಕೆ | ಏನೆಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ?
ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರದ ಪ್ರಮುಖರು, ಕಾರ್ಯಕರ್ತರ ಉರಿಬಿಸಿಲನ್ನೂ ಸಹ ಲೆಕ್ಕಿಸದೇ ಅಸಂಖ್ಯಾತ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಕಾರ್ಯಕರ್ತರು ಬಿ.ವೈ. ರಾಘವೇಂದ್ರ ಅವರಿಗೆ ಹೂವು, ಹಣ್ಣಿನ ಹಾರಗಳನ್ನು ಹಾಕಿದರು.
ಇನ್ನು, ಬಿಜೆಪಿ-ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಎರಡೂ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಎರಡೂ ಪಕ್ಷದ ಬಾವುಟಗಳು ಮೆರವಣಿಗೆಯಲ್ಲಿ ರಾರಾಜಿಸಿದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post