ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿ ಸ್ಫರ್ಧಿತ್ತಿರುವ ಬಿ.ವೈ. ರಾಘವೇಂದ್ರ #B Y Raghavendra ಅವರು ಇಂದು ಒಂದೇ ದಿನ ಎರಡು ನಾಮಪತ್ರ ಸಲ್ಲಿಸಿದ್ದಾರೆ.
ಒಬ್ಬರ ಅಭ್ಯರ್ಥಿ ನಾಲ್ಕು ನಾಮಪತ್ರ ಸಲ್ಲಿಸಲು ಅವಕಾಶವಿದೆ. ಇದರಂತೆ ಇಂದು ಒಂದೇ ದಿನ ರಾಘವೇಂದ್ರ ಅವರು ಎರಡು ನಾಮಪತ್ರವನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಸಲ್ಲಿಸಿದ್ದಾರೆ.

Also read: ಬರಗಾಲ, ಬೆಲೆ ಏರಿಕೆ ವೇಳೆ ಗ್ಯಾರಂಟಿ ಫಲಾನುಭವಿಗಳ ಶ್ರೀರಕ್ಷೆ ನಮಗಿದೆ: ಗೀತಾ ಶಿವರಾಜಕುಮಾರ
ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರದ ಪ್ರಮುಖರು, ಕಾರ್ಯಕರ್ತರ ಉರಿಬಿಸಿಲನ್ನೂ ಸಹ ಲೆಕ್ಕಿಸದೇ ಅಸಂಖ್ಯಾತ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಎರಡನೇ ಬಾರಿ ಶಾಸಕ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post