ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಶಬರೀಶನಗರದಲ್ಲಿ ಬಡ ಮಹಿಳೆಯೊಬ್ಬರ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಡೆದಿದೆ.
ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿರುವುದು ತಿಳಿದು ಕುಟುಂಬ ಸುರಕ್ಷಿತವಾಗಿ ಪಾರಾಗಿದೆ.

Also read: ಬೇಲೂರು | ತಂಪಾದ ವಾತವರಣದಲ್ಲಿ ಚೆನ್ನಕೇಶವ ಸ್ವಾಮಿಯ ಅದ್ದೂರಿ ರಥೋತ್ಸವ
ಸ್ಥಳಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post