ಕಲ್ಪ ಮೀಡಿಯಾ ಹೌಸ್ | ಬೈಂದೂರು |
‘ಲೋಕಸಭಾ ಚುನಾವಣೆಯಲ್ಲಿ ಮತದಾರರು ನನ್ನ ಕೈ ಬಲಪಡಿಸಿದರೆ, ಸಮಾಜದ ಎಲ್ಲಾ ಧರ್ಮ, ವರ್ಗದವರ ಹಿತ ಕಾಪಾಡುವ ಜತೆಗೆ ನೈತಿಕ ನ್ಯಾಯ ಒದಗಿಸಲು ಶ್ರಮಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ #Geetha Shivarajkumar ಹೇಳಿದರು.
ತಾಲ್ಲೂಕಿನ ಹಟ್ಟಿಯಂಗಡಿ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಪರ ಮತಯಾಚನೆ ಹಾಗೂ ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ’ದಲ್ಲಿ ಪಾಲ್ಗೊಂಡು ಮಾತನಾಡಿದರು.

‘ಈ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ #Bangarappa ಅವರು ಹತ್ತು ಹಲವು ಕಾರ್ಯಕ್ರಮಗಳನ್ನು ನೀಡಿದ್ದರು. ಅದೇ ರೀತಿ, ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಅವರು ಮಾಡದೆ ಹೋದ ಅನೇಕ ಕಾರ್ಯಗಳನ್ನು ಮುಂದಿನ ನನ್ನ ರಾಜಕೀಯ ಪರ್ವದಲ್ಲಿ ಮಾಡಲು ಉತ್ಸುಕಳಾಗಿದ್ದೇನೆ’ ಎಂದರು.

Also read: ಇದು ಕೇವಲ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿಯಿದೆ, ಮತ್ತೊಮ್ಮೆ ಬೆಂಬಲಿಸಿ: ಬಿ.ವೈ.ರಾಘವೇಂದ್ರ ಮನವಿ
‘ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ, ಜನ ಸಮಾನ್ಯರು ಉಸಿರಾಡಬಹುದು. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಿ ಆಶೀರ್ವದಿಸಬೇಕು’ ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ತಡಕಲ್, ನಟ ಶಿವರಾಜಕುಮಾರ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕೆ. ಶೆಟ್ಟಿ, ಪ್ರಮುಖರಾದ ಆನಂದ ಬಿಲ್ಲವ, ಗೋವಿಂದ ರಾಜ್ ಶೆಟ್ಟಿ, ಚಂದ್ರ ದೇವಾಡಿಗ, ಬಿ.ಆರ್.ರಾಜು, ಉದಯ್ ಕುಮಾರ್ ಶೆಟ್ಟಿ, ಭುಜಂಗ ಶೆಟ್ಟಿ,ಶ್ರೀಕಾಂತ್ ಪೂಜಾರಿ, ಪ್ರಶಾಂತ್, ತಲ್ಲೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಮತಿ ಹೆಗಡೆ ಸೇರಿ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post