ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ 2024ರ ಪರೀಕ್ಷೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರ್, ಮೆಡಿಕಲ್, ಡೆಂಟಲ್ ಮತ್ತು ಇತರೆ ಸೀಟುಗಳನ್ನು ಸಮರ್ಥವಾಗಿ ಅರ್ಹತೆ ಆಧಾರದಲ್ಲಿ ಹಂಚಿಕೆ ಮಾಡುವ ದೃಷ್ಟಿಯಿಂದ ಸಿಇಟಿ ಆರಂಭವಾಗಿದೆ. ಆದರೆ, ಈಗ ಈ ಸಿಇಟಿ ಪರೀಕ್ಷೆಯಲ್ಲಿ ಅನೇಕ ನ್ಯೂನ್ಯತೆಗಳು ಕಂಡು ಬರುತ್ತಿವೆ. ವಿದ್ಯಾರ್ಥಿಗಳ ಪಾಲಿಗೆ ನಂಬಿಕೆಯನ್ನು ಕಳೆದುಕೊಂಡಿವೆ. ರಾಜ್ಯ ಸರ್ಕಾರಗಳ ನ್ಯೂನ್ಯತೆ ಮತ್ತು ಇಚ್ಛಾಶಕ್ತಿ ಕೊರತೆಯಿಂದ ಮನಬಂದಂತೆ ಪರೀಕ್ಷೆಗಳನ್ನ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

Also read: ಶಿಕಾರಿಪುರ: ಬಾಲಕಿ ಅನುಮಾನಾಸ್ಪದ ಸಾವು..!
ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿರುವುದರಿಂದ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗಿದೆ. ಆದ್ದರಿಂದ ಸಮಸ್ಯೆ ಸೃಷ್ಟಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕು. ಸಿಇಟಿ ಗೊಂದಲ ಬಗೆಹರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post