ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಬ್ಬರು ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ #SexualAssault ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗ #Chitradurga ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ #SupremeCourt ರದ್ದು ಮಾಡಿದ್ದು, ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಮತ್ತೆ ಜೈಲು ಸೇರಲಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿವಮೂರ್ತಿ ಶರಣರಿಗೆ #MurugaSwamiji ಕೆಲವು ತಿಂಗಳ ಹಿಂದೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ದ ಜಾಮೀನು ನೀಡಿತ್ತು.
ಆದರೆ, ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಿಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್. ಏಕಾಂತಯ್ಯ ಅವರು ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು.
ಶ್ರೀಗಳಿಗೆ ನೀಡಲಾಗಿರುವ ಜಾಮೀನನ್ನು ರದ್ದು ಮಾಡುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನನ್ನು ರದ್ದುಗೊಳಿಸಿ, ಮುಂದಿನ ನಾಲ್ಕು ತಿಂಗಳುಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಪ್ರಮುಖವಾಗಿ, ಒಂದು ವಾರದ ಒಳಗಾಗಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಆರೋಪಿ ಸ್ವಾಮೀಜಿಗೆ ನ್ಯಾಯಾಲಯ ಆದೇಶಿಸಿದೆ. 4 ತಿಂಗಳ ಅವಧಿಯಲ್ಲಿ ತನಿಖೆ ಪೂರ್ಣಗೊಳ್ಳಲಿದ್ದರೆ, ಇನ್ನೂ ಎರಡು ತಿಂಗಳು ಅವಧಿಯನ್ನು ವಿಸ್ತರಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.
ನ್ಯಾಯಾಲಯದ ಆದೇಶದಂತೆ ಸ್ವಾಮೀಜಿ ಒಂದು ವಾರದ ಒಳಗಾಗಿ ಮ್ಯಾಜಿಸ್ಟೆçÃಟ್ ಮುಂದೆ ಹಾಜರಾಗಬೇಕು. ಪ್ರಮುಖವಾಗಿ ಸಂತ್ರಸ್ತೆಯರು ಹಾಗೂ ಪೋಷಕರ ವಿಚಾರಣೆ ಮುಗಿಯುವವರೆಗೂ ಶ್ರೀಗಳು ಬಂಧನದಲ್ಲೇ ಇರಬೇಕು ಎಂದು ಸೂಚನೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post