ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ ಹಗರಣ ಮುಕ್ತ, ವಿವಿಧಾತ್ಮಕವಲ್ಲದ ವ್ಯಕ್ತಿ, ಸರಳ ಸಜ್ಜನಿಕೆಯ ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ #B Y Raghavendra ಅವರು ಗೆಲ್ಲುವುದು ಶತಸಿದ್ಧ ಎಂದು ಜೆಡಿಎಸ್ ರಾಜ್ಯ ಮುಖಂಡ ಆರ್.ಎ. ಚಾಬುಸಾಬ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಕೇಂದ್ರ ಸಚಿವರಾಗಲು ಮತ್ತೊಮ್ಮೆ ಬಿ.ವೈ.ರಾಘವೇಂದ್ರ ಅವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

Also read: ಸಿದ್ದರಾಮಯ್ಯಗೆ ವಿಶೇಷ ಹಾರ ಹಾಕಿದ ಅರಸೀಕೆರೆ ವಿದ್ಯಾರ್ಥಿನಿ | ಯಾವುದರಿಂದ ಮಾಡಿದ್ದು ನೋಡಿ
ರಾಷ್ಟ್ರದ ವಿಚಾರಕ್ಕೆ ಬಂದಾಗ ರಾಷ್ಟ್ರದ ಹಿತಾಸಕ್ತಿ ಅತಿ ಮುಖ್ಯವಾಗಿದೆ. ಕಾಂಗ್ರೆಸ್ ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಸ್ವತಂತ್ರವಾಗಿ ಸರ್ಕಾರ ರಚಿಸುವ ಯಾವುದೇ ನೈತಿಕ ಶಕ್ತಿಯನ್ನು ಹೊಂದಿಲ್ಲದ ಕಾರಣ ಕಾಂಗ್ರೆಸ್ ಪಕ್ಷದವರು ಈ ಬಾರಿ ಚುನಾವಣೆಯಲ್ಲಿ ಕೇವಲ 250 ಅಭ್ಯರ್ಥಿಗಳನ್ನು ಮಾತ್ರ ಕಣಕ್ಕಿಳಿಸಿದೆ. ಸರ್ಕಾರ ರಚಿಸುವ ಯಾವುದೇ ಸಾಧ್ಯತೆಗಳು ಇಲ್ಲದಿರುವುದರಿಂದ ಅಲ್ಪಸಂಖ್ಯಾತರು ಮತ್ತು ಜಾತ್ಯಾತೀತ ಮತಗಳು ವಿಭಜನೆಯಾಗದಂತೆ ನಿಗಾವಹಿಸಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಅತಿ ಹೆಚ್ಚು ಮತಗಳಿಂದ ಜಯಗೊಳಿಸುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಅನುವು ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post