ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮತದಾರರೇ, ಈ ಲೋಕಸಭಾ ಚುನಾವಣೆಯಲ್ಲಿ ನನ್ನ ಕ್ರಮಸಂಖ್ಯೆ 8 ಹಾಗೂ ನನ್ನ ಗುರುತು ಕಬ್ಬಿನ ಜಲ್ಲೆ ಜೊತೆಗಿರುವ ರೈತ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಜನ ದಡ್ಡರಲ್ಲ. ನನ್ನ ಫೋಟೋ ನೋಡಿ ಕಬ್ಬಿನ ಜಲ್ಲೆ ಜೊತೆ ರೈತ ಗುರುತಿಗೇ ಮತವನ್ನು ಹಾಕುತ್ತಾರೆ. ಇಷ್ಟು ದಿನ ಚಿಹ್ನೆ ಇರಲಿಲ್ಲ. ಈಗ ಚಿಹ್ನೆ ಬಂದಿದೆ. ಈಗ ಕ್ರಮ ಸಂಖ್ಯೆ 8, ಕೆ.ಎಸ್. ಈಶ್ವರಪ್ಪ, ಕಬ್ಬಿನ ಜಲ್ಲೆ ಜೊತೆ ರೈತ ಚಿಹ್ನೆ ಇರುವ ಕರಪತ್ರವನ್ನು ಕೈಯಲ್ಲಿ ಹಿಡುದು ಕಾರ್ಯಕರ್ತರು ಮನೆ ಮನೆಗೆ ಹೋಗಿ ಪ್ರಚಾರವನ್ನು ನಡೆಸಲಿದ್ದಾರೆ ಎಂದರು.
ನನ್ನನ್ನು ಚುನಾವಣೆಯಲ್ಲಿ ಸೋಲಿಸಲು ಪಿತೂರಿ ಮಾಡಿ ನನ್ನ ಹೆಸರಿನ ವ್ಯಕ್ತಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ಜನ ದಡ್ಡರಲ್ಲ. ಅವರು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು.
Also read: ಗಂಗಾವತಿ | ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕಾಗಿ ಯುವಕನ ಮೇಲೆ ಹಲ್ಲೆ
ಮೋದಿ ಟೀಕೆ ಮಾಡಿದರೆ ಸಿಗೋದು ಚೊಂಬೇ
ಮೋದಿಯನ್ನು #Modi ಕಾಂಗ್ರೆಸ್ಸಿಗರು ಟೀಕೆ ಮಾಡಿದರೆ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅವರಿಗೆ ಸಿಗುವುದು ಚೊಂಬು. ತಾಳಿ ಪವಿತ್ರವಾದ ಹಿಂದೂ ಮಹಿಳೆಯರ ಸಂಕೇತ ಎಂದರು.
ಮೋದಿ ಯಾಕೆ ಹೇಳಿದ್ದಾರೆ ಗೊತ್ತಿಲ್ಲ ಯತೀಂದ್ರ ಸಿದ್ದರಾಮಯ್ಯ ಯಾಕೆ ಹೇಳಿದ್ದಾರೋ ಗೋತ್ತಿಲ್ಲ. ಮೋದಿ ಹೇಳಿಕೆ ಬಗ್ಗೆ ಚರ್ಚೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post