ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಪತ್ನಿ ಗೀತಾ ಶಿವರಾಜಕುಮಾರ್ ಪರವಾಗಿ ಜನರ ಒಲವು ವ್ಯಕ್ತವಾಗುತ್ತಿದೆ ಎಂದು ನಟ ಶಿವರಾಜ ಕುಮಾರ್ #Actor Shivaraj Kumar ಭರವಸೆ ವ್ಯಕ್ತಪಡಿಸಿದರು.
ತಮ್ಮ ಪತ್ನಿ ಜೊತೆಯಲ್ಲಿ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಪೀಠದ #Adichunchanagiri ಪ್ರಸನ್ನನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದ ವೇಳೆ ಅವರು ಮಾತನಾಡಿದರು.
ಮಠಕ್ಕೆ ಭೇಟಿ ನೀಡಿರುವುದು ಸಂತಸ ತಂದಿದೆ. ಅದೇ ರೀತಿ, ಇಲ್ಲಿ ಗುರುಗಳನ್ನು ಭೇಟಿ ನಡೆಸಿ ಆಶೀರ್ವಾದ ಪಡೆಯಲಾಯಿತು. ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಪತ್ನಿ ಗೀತಾ ಪರ ಜನರು ಹೆಚ್ಚಿನ ಬೆಂಬಲ ಸೂಚಿಸುತ್ತಿದ್ದಾರೆ. ಇಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಜನರ ಒಲವು ಗೀತಾ ಅವರಿಗೆ ವ್ಯಕ್ತವಾಗುತ್ತಿದೆ ಎಂದರು.
Also read: ಹಳೇ ಸೊರಬದ ಕೆರೆ ಜೀವಂತ ಸಮಾಧಿ! ಇದು ಜಲಮೂಲದ ಕಣ್ಣೀರ ಕತೆ
ಗೀತಾ ಶಿವರಾಜಕುಮಾರ್ #Geetha Shivarajkumar ಮಾತನಾಡಿ, ಜಿಲ್ಲೆಯ ಬಹುತೇಕ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮತಯಾಚನೆ ನಡೆಸಲಾಗಿದೆ. ಇಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಜನರು ಮನವಿ ಮಾಡಿಕೊಂಡಿದ್ದಾರೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Madhu Bangarappa ಅವರ ಗಮನಕ್ಕೆ ತಂದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಭರವಸೆ ನೀಡಲಾಗಿದೆ. ಅದೇ, ರೀತಿ ಮುಂದಿನ ದಿನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಂತದಲ್ಲಿ ಹರಿಹರಿಸಬಹುದಾದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಲಾಗ ಎಂದರು.
ಮಠದ ವಾರ್ಷಿಕೋತ್ಸವ ನಿಮಿತ್ತ ಆಯೋಜಿಸಿದ್ದ ಸಾಮೂಹಿಕ ಉಚಿತ ವಿವಾಹ ಹಾಗೂ 50 ವರ್ಷ ದಾಂಪತ್ಯ ಜೀವನ ಪೂರೈಸಿದ ಹಿರಿಯರನ್ನು ಗೌರವಿಸುವ ಸಮಾರಂಭದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಸೂಡ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ, ಕಲಗೋಡು ರತ್ನಾಕರ, ಭೋವಿ ನಿಗಮ ಅಧ್ಯಕ್ಷ ರವಿಕುಮಾರ್, ರಮೇಶ್ ಹೆಗ್ಡೆ, ಸೇರಿ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post